DRDO ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಪ್ರಕ್ರಿಯೆಯು ನಾಳೆ, ಸೆಪ್ಟೆಂಬರ್ 27 ರಿಂದ ಪ್ರಾರಂಭವಾಗಲಿದೆ. ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ, ಅಭ್ಯರ್ಥಿಗಳು ಮೆಕ್ಯಾನಿಕಲ್ ಅಥವಾ ಕೆಮಿಕಲ್ ಸೇರಿದಂತೆ ಸಂಬಂಧಿತ ಶಾಖೆಯಲ್ಲಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು. ಅಧಿಕೃತ ವೆಬ್‌ಸೈಟ್ drdo.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಗುಡ್ನ್ಯೂಸ್ ಇಲ್ಲಿದೆ. DRDO ತನ್ನ ಹೈದರಾಬಾದ್ ಮೂಲದ ಸಂಶೋಧನಾ ಕೇಂದ್ರದಲ್ಲಿ ತರಬೇತಿಗಾಗಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ . ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ನಾಳೆ, ಸೆಪ್ಟೆಂಬರ್ 27ರಿಂದ ಪ್ರಾರಂಭವಾಗುತ್ತಿದೆ. ಅಕ್ಟೋಬರ್ 28 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ drdo.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 195 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು, ಇದರಲ್ಲಿ 40 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳು, 20 ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ ಹುದ್ದೆಗಳು ಮತ್ತು 135 ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಸೇರಿವೆ. ಅರ್ಜಿದಾರರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ಅರ್ಹತೆಗಳೇನು?
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ, ಅಭ್ಯರ್ಥಿಗಳು ಮೆಕ್ಯಾನಿಕಲ್ ಅಥವಾ ಕೆಮಿಕಲ್ ಸೇರಿದಂತೆ ಸಂಬಂಧಿತ ಶಾಖೆಯಲ್ಲಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು. ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ, ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ ಅಗತ್ಯವಿದೆ. ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫಿಟ್ಟರ್, ವೆಲ್ಡರ್, ಟರ್ನರ್, ಮೆಷಿನಿಸ್ಟ್, ಮೆಕ್ಯಾನಿಕ್-ಡೀಸೆಲ್, ಡ್ರಾಫ್ಟ್ಸ್‌ಮನ್ (ಮೆಕ್ಯಾನಿಕಲ್), ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಸಿಒಪಿಎ ಅಥವಾ ಲೈಬ್ರರಿ ಅಸಿಸ್ಟೆಂಟ್‌ನಂತಹ ಟ್ರೇಡ್‌ಗಳಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.
ಅರ್ಜಿದಾರರ ವಯಸ್ಸಿನ ಮಿತಿ:
ಅರ್ಜಿದಾರರು 18 ವರ್ಷಕ್ಕಿಂತ ಕಡಿಮೆಯಿರಬಾರದು. ಮೀಸಲು ವಿಭಾಗಗಳ ಅರ್ಜಿದಾರರು ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳ ವಯಸ್ಸನ್ನು ಸೆಪ್ಟೆಂಬರ್ 1, 2025 ರಂತೆ ಲೆಕ್ಕಹಾಕಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿದಾರರನ್ನು ಅವರ ಶೈಕ್ಷಣಿಕ ಅರ್ಹತೆ ಮತ್ತು ತಾಂತ್ರಿಕ ಕೌಶಲ್ಯಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಆಯ್ಕೆಯಾದ ಪದವೀಧರ ಅಭ್ಯರ್ಥಿಗಳಿಗೆ ತಿಂಗಳಿಗೆ 9,000ರೂ. ಸ್ಟೈಫಂಡ್ ಮತ್ತು ಡಿಪ್ಲೊಮಾ ಅಭ್ಯರ್ಥಿಗಳಿಗೆ ತಿಂಗಳಿಗೆ 8,000 ರೂ. ಸ್ಟೈಫಂಡ್ ನೀಡಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ, ಅಧಿಸೂಚನೆಯನ್ನು ಪರಿಶೀಲಿಸಿ.
For More Updates Join our WhatsApp Group :

