ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಆತಂಕದ ಕ್ಷಣ
ಮಡಿಕೇರಿ: ತಾಲೂಕಿನ ತಾಳತ್ಮನೆ ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಚಾಲಕನಿಗೆ ಚಾಲನೆ ಮಧ್ಯೆಯೇ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ‘ಪೂರ್ಣಿಮಾ ಟ್ರಾವೆಲ್ಸ್’ ಬಸ್ ರಸ್ತೆ ಬದಿಯ ದಿಣ್ಣೆಗೆ ಡಿಕ್ಕಿ ಹೊಡೆದರೂ, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ ಪ್ರಪಾತಕ್ಕೆ ಉರುಳದೇ ದಿಣ್ಣೆಗೆ ಗುದ್ದಿದ್ದರಿಂದ ಭಾರೀ ದುರಂತ ತಪ್ಪಿದಂತಾಗಿದೆ. ಘಟನೆ ಬಳಿಕ ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ 107 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸರ್ಕಾರ ರಚಿಸಲು ಅಗತ್ಯವಿರುವ 118 ಸಂಖ್ಯೆಗೆ ತಲುಪಲು ಇನ್ನೂ ಕೆಲ ಶಾಸಕರ ಬೆಂಬಲಕ್ಕಾಗಿ ತೀವ್ರ ರಾಜಕೀಯ ಚಟುವಟಿಕೆ ನಡೆಯುತ್ತಿದೆ.ನಿರ್ಗಮಿತ ಸಿಎಂ ಎಂ.ಕೆ. ಸ್ಟಾಲಿನ್, “ವಿಜಯ್ ಸರ್ಕಾರ ರಚಿಸಲಿ, ನಾವು ಆರು ತಿಂಗಳು ತೊಂದರೆ ಕೊಡುವುದಿಲ್ಲ” ಎಂದು ಹೇಳಿಕೆ ನೀಡಿರುವುದು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಇಂಧನ ಬೆಲೆ ಏರಿಕೆ ಹಾಗೂ ವಾಣಿಜ್ಯ ಗ್ಯಾಸ್ ಪೂರೈಕೆ ಸಮಸ್ಯೆಯಿಂದ ಸಾವಿರಾರು ಸಣ್ಣ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿವೆ.ಸರ್ಕಾರಿ ವಾಣಿಜ್ಯ ಸಿಲಿಂಡರ್ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಕೈಗಾರಿಕೆಗಳು ಖಾಸಗಿ ಏಜೆನ್ಸಿಗಳ ಮೇಲೆ ಅವಲಂಬಿತವಾಗಿವೆ. ಇದರಿಂದ ಗ್ಯಾಸ್ ದರ ದ್ವಿಗುಣವಾಗಿ ಉತ್ಪಾದನಾ ವೆಚ್ಚ ಹೆಚ್ಚಾಗಿದೆ.
ಉತ್ಪಾದನಾ ವೆಚ್ಚ ಭರಿಸಲಾಗದೆ ಸಾವಿರಕ್ಕೂ ಹೆಚ್ಚು ಕಟ್ಟಿಂಗ್ ಯೂನಿಟ್‌ಗಳು ಹಾಗೂ ಸಣ್ಣ ಕೈಗಾರಿಕೆಗಳು ಮುಚ್ಚುವ ಭೀತಿಯಲ್ಲಿವೆ. ಉದ್ಯಮಿಗಳು ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದ್ದಾರೆ.
For More Updates Join our WhatsApp Group :




