ರಾಜ್ಯದ ಹಲವೆಡೆ ಶುಷ್ಕ ವಾತಾವರಣ.
ಬೆಂಗಳೂರು: ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಒಣಹವೆ?
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಶುಷ್ಕ ವಾತಾವರಣ
ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 16°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.
For More Updates Join our WhatsApp Group :




