ಟಾಲಿವುಡ್‍ಗೆ ದುನಿಯಾ ವಿಜಿ ಎಂಟ್ರಿ : ಬಾಲಯ್ಯ ಜೊತೆ ನಟನೆ ಕನ್ಫರ್ಮ್

ಬೆಂಗಳೂರು: ‘ಸಲಗ’ ಚಿತ್ರದ ಯಶಸ್ಸಿನ ಸಂಭ್ರಮದಲ್ಲಿರುವ ಸ್ಯಾಂಡಲ್‍ವುಡ್ ಕರಿ ಚಿರತೆ ದುನಿಯಾ ವಿಜಯ್ ಅವರು ಇದೀಗ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಹೌದು. ದುನಿಯಾ ವಿಜಿ ಅವರು ನಂದಮೂರಿ ಬಾಲಕೃಷ್ಣ ಜೊತೆ ನಟನೆ ಮಾಡುವುದು ಕನ್ಫರ್ಮ್ ಆಗಿದೆ. ಈ ಹಿಂದೆ ಬಾಲಯ್ಯ ಜೊತೆ ವಿಜಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಆದರೆ ಈ ಬಗ್ಗೆ ವಿಜಿ ಎಲ್ಲಿಯೂ ಬಹಿರಂಗಪಡಿಸಿರಲಿಲ್ಲ. ಆದರೆ ಇದೀಗ ಚಿತ್ರತಂಡವೇ ಇದನ್ನು ಅಧಿಕೃತ ಮಾಡಿದೆ.

ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್ ಮಲಿನೇನಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ವಿಜಿ ತೆರೆ ಹಂಚಿಕೊಳ್ಳುತ್ತಿರುವುದು ಬಾಲಯ್ಯ ಅವರ 107 ನೇ ಸಿನಿಮಾವಾಗಿದೆ. ಚಿತ್ರಕ್ಕೆ ಟೈಟಲ್ ಇಡಲಾಗಿಲ್ಲ. ಆದರೆ ಈ ಸಿನಿಮಾಕ್ಕಾಗಿ ವಿಜಯ್ ಈಗಾಗಲೇ ತಮ್ಮ ಲುಕ್ ಬದಲಾಯಿಸಿಕೊಂಡಿದ್ದು, ವಿಶೇಷ ಲುಕ್ ನಲ್ಲಿ ಮಿಂಚುತ್ತಿದ್ದಾರೆ. ಆದರೆ ವಿಜಿ ಯಾವ ಪಾತ್ರ ಮಾಡಲಿದ್ದಾರೆ ಎಂಬುದು ಮಾತ್ರ ಇನ್ನೂ ತಿಳಿದುಬಂದಿಲ್ಲ

ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಖ್ಯಾತ ನಿರ್ಮಾಣ ಸಂಸ್ಥೆ `ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ. ಈಗಾಗಲೇ ನಿರ್ದೇಶಕರು, ಪೋಸ್ಟರ್ ಬಿಡುಗಡೆ ಮಾಡಿ ವಿಜಿಯನ್ನು ಸ್ವಾಗತಿಸಿದ್ದಾರೆ.

Pragati TV Social Connect for more latest u

Leave a Reply

Your email address will not be published. Required fields are marked *