ದಸರಾ ಗಜಪಡೆಯ ಗಜ ಗಲಾಟೆ..

ದಸರಾ ಗಜಪಡೆಯ ಗಜ ಗಲಾಟೆ..

ಮೈಸೂರು : ಮೈಸೂರು ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಯ ಕಂಜನ್ ಹಾಗೂ ಧನಂಜಯ ಆನೆ ನಡುವೆ ಊಟ ಮಾಡುವಾಗ ಗಲಾಟೆ ನಡೆದಿದೆ. ಆಕ್ರೋಶಗೊಂಡ ಧನಂಜಯ ಆನೆ ಕಂಜನ್ ಆನೆ ಮೇಲೆ ದಾಳಿಗೆ ಮುಂದಾಗಿದೆ. ಇದರಿಂದ ಬೆದರಿದ ಕಂಜನ್ ಆನೆ ಮಾವುತನಿಲ್ಲದೆ ಅರಮನೆಯಿಂದ ಆಚೆ ಓಡಿ ಬಂದಿದೆ. ಆದರೂ ಬೆನ್ನು ಬಿಡದ ಧನಂಜಯ ಆನೆ ಕಂಜನ್ ಆನೆಯನ್ನು ಅಟ್ಟಿಸಿಕೊಂಡು ಬಂದಿದೆ. ಇದರಿಂದ ಮತ್ತಷ್ಟು ಬೆದರಿದ ಕಂಜನ್ ಬ್ಯಾರಿಕೇಡ್ ತಳ್ಳಿಕೊಂಡು ಜನರ ಬಳಿ ಹೋಗಿದೆ.

ಈ ವೇಳೆ ಧನಂಜಯ ಅನೆ ಮೇಲೆ ಇದ್ದ ಮಾವುತ ಧೈರ್ಯದಿಂದ  ಸಮಯಪ್ರಜ್ಞೆಯಿಂದ ಕೋಪಗೊಂಡಿದ್ದ ಧನಂಜಯನನ್ನು ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಯಾವಾಗ ಧನಂಜಯ ಅಟ್ಟಾಡಿಸುವುದನ್ನು ನಿಲ್ಲಿಸಿತೋ ಬದುಕಿದೆಯಾ ಬಡ ಜೀವ ಅಂತಾ ಕಂಜನ್ ಆನೆ ಸಹಾ ನಿಂತುಕೊಂಡಿದೆ. ತಕ್ಷಣ ಕಂಜನ್ ಆನೆಯ ಬಳಿ ತೆರಳಿದ ಮಾವುತ ಕಂಜನ್ ಆನೆಯನ್ನು ಅರಮನೆ ಒಳಗೆ ಕರೆ ತಂದಿದ್ದಾನೆ.

ಈ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಮಾವುತರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಟ್ಟದಂತೆ ಬಂದ ಸಮಸ್ಯೆ ಮಂಜಿನಂತೆ ಕರಗಿ ಎಲ್ಲರೂ ನೆಮ್ಮದಿಯ ನಿಟ್ಡುಸಿರು ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *