ಕಲಬುರಗಿ : ಕಲಬರುಗಿ ನಗರದ ಹೋಟೆಲ್ ವೊಂದರಲ್ಲಿ ಇಂದು ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕಲಬುರಗಿ ನಗರದ ಸಪ್ತಗಿರಿ ಆರೆಂಜ್ ಹೋಟೆಲ್ ನಲ್ಲಿ ಇಂದು ಬೆಳಗ್ಗೆ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ.
ಸ್ಪೋಟಗೊಂಡ ಪರಿಣಾಮ ಹಲವರು ಗಂಬೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೋಟೆಲ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ 11 ಮಂದಿ ಕಾರ್ಮಿರು ಗಾಯಗೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.