ಕಾರವಾರ : ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು , 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ನಲ್ಲಿ ನಡೆದಿದೆ. ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಬಸ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಫಘಾತ ಸಂಭವಿಸಿದೆ. ಮೃತ ಮೂವರು ಬಾಗಲಕೋಟೆ ಮೂಲದವರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಬಾಗಲಕೋಟೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಸ್ ಚಾಲಕನ ಮೇಲೆ ಪ್ರಕರಣ ದಾಖಲು
ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಮತ್ತು ಇನ್ನೋರ್ವ 45 ವರ್ಷದ ವ್ಯಕ್ತಿ (ಹೆಸರು ಪತ್ತೆ ಆಗಿಲ್ಲ) ಮೃತರು. ಇನ್ನು ಗಾಯಗೊಂಡ 7 ಜನರು ಬಾಗಲಕೋಟೆ ಮೂಲದವರು ಎಂದು ತಿಳಿದು ಬಂದಿದೆ. ಚಿಕ್ಕಚಿಕ್ಕ ಮಕ್ಕಳಿಗೂ ಗಂಭೀರ ಗಾಯಗಳಾಗಿದ್ದು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಲಮಟ್ಟಿ ಗ್ರಾಮದ ಯಮನಪ್ಪ ಮಾಗಿ ಬಸ್ ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ.
For More Updates Join our WhatsApp Group :