ಪೇರಳೆ ಹಣ್ಣು ಈ ಋತುವಿನಲ್ಲಿ ವ್ಯಾಪಕವಾಗಿ ಮಾರುಕಟ್ಟೆಗಳಲ್ಲಿ ಕಾಣುವುದಕ್ಕೆ ಸಿಗುತ್ತದೆ. ಹಾಗಾಗಿ ಅನೇಕರು ಇದನ್ನು ತಿನ್ನಲು ಇಷ್ಟಪಡುತ್ತಾರೆ. ಅದಲ್ಲದೆ ಈ ಹಣ್ಣು ತಿನ್ನುವುದಕ್ಕೂ ಕೂಡ ಬಹಳ ರುಚಿಯಾಗಿರುವುದರಿಂದ ಎಲ್ಲರೂ ಖರೀದಿ ಮಾಡುತ್ತಾರೆ. ಎಲ್ಲಾ ಹಣ್ಣುಗಳಂತೆಯೇ ಇದು ಕೂಡ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಆದರೆ ಕೆಲವು ರೀತಿಯ ಆರೋಗ್ಯ ಸಮಸ್ಯೆ ಇರುವವರು ಈ ಹಣ್ಣಿನ ಸೇವನೆಯಿಂದ ದೂರವಿರಬೇಕು ಎಂದು ತಜ್ಞರು ಹೇಳುತ್ತಾರೆ.

ಪೇರಳೆ ಹಣ್ಣು ಈ ಋತುವಿನಲ್ಲಿ ವ್ಯಾಪಕವಾಗಿ ಲಭ್ಯವಿರುತ್ತದೆ. ಜುಲೈ ಮತ್ತು ಸೆಪ್ಟೆಂಬರ್ ನಲ್ಲಿ ಇದರ ಇಳುವರಿ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಮಾರುಕಟ್ಟೆಯಲ್ಲಿ ಅವುಗಳ ಮಾರಾಟ ಬಲು ಹೆಚ್ಚಾಗಿಯೇ ಇರುತ್ತದೆ. ಇದು ತಿನ್ನುವುದಕ್ಕೂ ಬಹಳ ರುಚಿಯಾಗಿರುವುದರಿಂದ ಚಿಕ್ಕವರಿಂದ ದೊಡ್ಡವರ ವರೆಗೆ ಎಲ್ಲರೂ ಇವುಗಳನ್ನು ತಿನ್ನಲು ಬಯಸುತ್ತಾರೆ. ಮಾತ್ರವಲ್ಲ ಇದರಲ್ಲಿರುವ ಆರೋಗ್ಯ ಪ್ರಯೋಜನಗಳಿಂದ ಮತ್ತು ಇದರ ಬೆಲೆಯೂ ಕೈಗೆಟಕುವ ರೀತಿಯಲ್ಲಿ ಇರುವುದರಿಂದ ಈ ಹಣ್ಣನ್ನು ಬಡವರ ಸೇಬು ಎಂದು ಕರೆಯಲಾಗುತ್ತದೆ. ಈ ಹಣ್ಣಿನಲ್ಲಿ ಅತ್ಯಧಿಕ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಸೇಬಿನಂತೆಯೇ ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಆದರೂ ಕೂಡ ಕೆಲವು ತಜ್ಞರು ಪೇರಳೆ ಹಣ್ಣನ್ನು ಹೆಚ್ಚು ತಿನ್ನಬಾರದು ಎಂದು ಹೇಳುತ್ತಾರೆ. ಏಕೆ ಗೊತ್ತಾ? ಯಾರು ಈ ಹಣ್ಣಿನ ಸೇವನೆ ಮಾಡುವುದು ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.
ಪೇರಳೆ ಹಣ್ಣಿನ ಪ್ರಯೋಜನ:
ಪೇರಳೆಯಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಇದು ಕಿತ್ತಳೆಗಿಂತ ನಾಲ್ಕು ಪಟ್ಟು ಹೆಚ್ಚು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ವಿಟಮಿನ್ ಎ ಕಣ್ಣಿನ ಆರೋಗ್ಯಕ್ಕೆ ಪ್ರಯೋಜನಕಾರಿ. ಇದರಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಪೇರಳೆಯಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡುತ್ತವೆ ಮತ್ತು ಜೀವಕೋಶಗಳನ್ನು ರಕ್ಷಿಸುತ್ತವೆ, ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಈ ಹಣ್ಣಿನಿಂದ ಹಲವಾರು ಪ್ರಯೋಜನಗಳಿವೆ. ಆದರೂ ಕೂಡ ಕೆಲವು ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಪೇರಳೆ ತಿನ್ನುವುದನ್ನು ತಪ್ಪಿಸಬೇಕಾಗುತ್ತದೆ.
ಮೂತ್ರಪಿಂಡದ ತೊಂದರೆ
ಇತ್ತೀಚಿನ ದಿನಗಳಲ್ಲಿ, ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತಿದೆ. ಹಾಗಾಗಿ ಪೇರಳೆ ಹಣ್ಣನ್ನು ಸೇವಿಸುವಾಗ ಬಹಳ ಜಾಗರೂಕರಾಗಿರಬೇಕು. ಪೇರಳೆಯಲ್ಲಿ ಪೊಟ್ಯಾಸಿಯಮ್ ಅಧಿಕವಾಗಿದ್ದು. ಮೂತ್ರಪಿಂಡದ ಸಮಸ್ಯೆಗಳಿಂದ ಬಳಲುತ್ತಿರುವವರು ಹೆಚ್ಚುವರಿ ಪೊಟ್ಯಾಸಿಯಮ್ ಅನ್ನು ಪರಿಣಾಮಕಾರಿಯಾಗಿ ಫಿಲ್ಟರ್ ಮಾಡಲು ಸಾಧ್ಯವಿಲ್ಲ. ಆದ್ದರಿಂದ, ಮೂತ್ರಪಿಂಡದ ಸಮಸ್ಯೆಗಳಿರುವವರು ಪೇರಳೆ ತಿನ್ನುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.