ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಲ ನಾಯಕರಿಗೆ ಇಂದು ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸುವ ಮೂಲಕ ಆಘಾತ ನೀಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಕುಸುಮ ಅವರ ಮುದ್ದಿಪಾಳ್ಯ ರಸ್ತೆಯಲ್ಲಿರುವ ಮನೆಮೇಲೆ ಈಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಅಧಿಕಾರಿಗಳಿಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಚಿತ್ರದುರ್ಗ ಶಾಸಕ ಕೆಸಿ ವಿರೇಂದ್ರ ಪಪ್ಪಿ ಅವರ ವ್ಯಾಪಾರಗಳಲ್ಲಿ ಕುಸುಮ ಅವರ ಸಹೋದರ ಭಾಗಿಯಾಗಿದ್ದಾರೆ, ಹಾಗಾಗೇ ಬೆಳಗಿನ ಜಾವ 4.30 ಕ್ಕೆ 2 ಕಾರುಗಳಲ್ಲಿ ಬಂದಿರುವ ಅಧಿಕಾರಿಗಳು ಕುಸುಮ ಮನೆ ಮೇಲೆ ದಾಳಿ ನಡೆಸಿದ್ದಾರೆ.
For More Updates Join our WhatsApp Group :




