ತೆರಿಗೆ ಸಂಗ್ರಹದಲ್ಲಿ ದೇಶದಲ್ಲಿ ಮೊದಲ ಸ್ಥಾನಕ್ಕೆ ಬಂದಿದ್ದರೂ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಹಿಂದಿನ ವರ್ಷಗಳಲ್ಲಿ ಅನುಸರಿಸುತ್ತಿದ್ದ ತಾರತಮ್ಯವನ್ನು ಈ ಸಲವೂ ಮುಂದುವರಿಸಿರುವುದು ಅತ್ಯಂತ ವಿಷಾದಕರ ವಿದ್ಯಮಾನವಾಗಿದೆ. ತೆರಿಗೆ ಪಾಲನ್ನು ನೀಡುವುದರಲ್ಲಿ ಕೇಂದ್ರವು ಅನುಸರಿಸುತ್ತಿರುವ ಪಕ್ಷಪಾತದ ವಿರುದ್ಧ ದನಿ ಎತ್ತುವುದು ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರು ಪ್ರಕಟಿಸಿದ್ದಾರೆ.
ಕಳೆದ ವರ್ಷ ಮಳೆ ಇಲ್ಲದೆ ತೀವ್ರ ಬರಗಾಲ ಪರಿಸ್ಥಿತಿಯನ್ನು ಎದುರಿಸಿದರೂ, ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ನೀಡುವ ಸವಾಲನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರ ಕೇಂದ್ರದಿಂದ ನ್ಯಾಯವಾಗಿ ಬರಬೇಕಾದ ತೆರಿಗೆ ಪಾಲಿಗಾಗಿ ಹೋರಾಟ ನಡೆಸಬೇಕಾದ ಪರಿಸ್ಥಿತಿ ಸೃಷ್ಟಿಯಾಗಿರುವುದು ರಾಜ್ಯದ ಜನತೆ ಗಂಭೀರವಾಗಿ ಪರಿಗಣßಸಬೇಕಾಗಿದೆ. ಕರ್ನಾಟಕ ಮಾತ್ರವಲ್ಲದೆ, ದಕ್ಷಿಣ ಭಾರತದ ಎಲ್ಲ ರಾಜ್ಯಗಳಿಗೂ ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ಉತ್ತರದ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ.
ಹದಿನೈದನೇ ಹಣಕಾಸು ಆಯೋಗದ ಶಿಫಾರಸಿನಂತೆ ಈ ಆರ್ಥಿಕ ವರ್ಷದಲ್ಲಿ ಸಂಗ್ರಹಿಸಿದ ಒಟ್ಟು ತೆರಿಗೆಯಲ್ಲಿ ಶೇ.41ರಷ್ಟನ್ನು ರಾಜ್ಯಗಳಿಗೆ ಹದಿನಾಲ್ಕು ಕಂತುಗಳಲ್ಲಿ ನೀಡಬೇಕಾಗಿರುವ ಕೇಂದ್ರ ಸರ್ಕಾರ ಅಕ್ಟೋಬರ್ ತಿಂಗಳಿಗೆ ಒಟ್ಟು 1,78,173 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು ಕರ್ನಾಟಕಕ್ಕೆ 6,498 ಕೋಟಿಯನ್ನು ನೀಡಿದೆ. ಇದು ಶೇ.3.64 ರಂತೆ ನಿರ್ಧರಿಸಿದ ತೆರಿಗೆ ಹಂಚಿಕೆಯಾಗಿದೆ. ಉತ್ತರ ಪ್ರದೇಶಕ್ಕೆ ಶೇ 17.93, ಬಿಹಾರಕ್ಕೆ ಶೇ 10.05, ಮಧ್ಯಪ್ರದೇಶಕ್ಕೆ ಶೇ 7.85ರಂತೆ ತೆರಿಗೆ ಪಾಲಿನ ಹಂಚಿಕೆಯಾಗಿದೆ. ಜನಸಂಖ್ಯೆಯನ್ನು ನಿಯಂತ್ರಣದಲ್ಲಿ ಇರಿಸಿಕೊಂಡ ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯವಾಗಿರುವುದು ಮೇಲುನೋಟಕ್ಕೆ ಎದ್ದು ಕಾಣುತ್ತಿರುವುದನ್ನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರು ಗಮನಿಸಿರುವುದು ಸ್ಪಷ್ಟವಾಗಿದೆ.
ದೇಶದಲ್ಲಿ ಏಕರೂಪದ ತೆರಿಗೆ ಪದ್ಧತಿಯಾಗಿ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೊಳಿಸಿದಂದಿನಿಂದ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳು ತೆರಿಗೆ ಪಾಲಿನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ ಎಂದು ಕೇಂದ್ರಕ್ಕೆ ಮನವಿ ಸಲ್ಲಿಸುತ್ತಿದ್ದರೂ ಪ್ರಯೋಜನವಾಗುತ್ತಿಲ್ಲ. ಈಚೆಗಷ್ಟೆ ರಾಜ್ಯಕ್ಕೆ ಭೇಟಿ ನೀಡಿದ ಹದಿನೈದನೇ ಹಣಕಾಸು ಆಯೋಗಕ್ಕೆ ರಾಜ್ಯದಿಂದ ಸಂಗ್ರಹವಾಗುತ್ತಿರುವ ತೆರಿಗೆ ಪ್ರಮಾಣಕ್ಕೂ, ಪ್ರತಿಯಾಗಿ ರಾಜ್ಯಕ್ಕೆ ಬರುತ್ತಿರುವ ತೆರಿಗೆ ಹಂಚಿಕೆಯ ಪಾಲಿಗೂ ಆಗುತ್ತಿರುವ ಅಜಗಜಾಂತರ ವ್ಯತ್ಯಾಸವನ್ನು ಕಡಿಮೆ ಮಾಡಲು ಮಾಡಿಕೊಂಡ ಮನವಿಯನ್ನು ಕೇಂದ್ರ ಸರ್ಕಾರ ಪರಿಗಣßಸಿಲ್ಲ ಎಂಬುದು ಸ್ಪಷ್ಟವಾಗಿದೆ.
ತೆರಿಗೆ ಹಂಚಿಕೆಯ ಪಾಲನ್ನು ಕನಿಷ್ಠ ಪ್ರಮಾಣಕ್ಕೆ ಇಳಿಸಿರುವುದು ರಾಜ್ಯದ ಜನತೆಗೆ ಮಾಡುತ್ತಿರುವ ಅನ್ಯಾಯ ಎಂದು ರಾಜ್ಯ ಸರ್ಕಾರದ ಪರವಾಗಿ ಈಗಾಗಲೇ ದನಿ ಎತ್ತಲಾಗಿದೆ. ಕಳೆದ ವರ್ಷ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಲ್ಲಿ ಸೂಕ್ತ ಪರಿಹಾರ ನೀಡಿಲ್ಲ ಎಂದು ಮಾಡಿದ ಆಗ್ರಹಕ್ಕೆ ಕೇಂದ್ರ ಹಣಕಾಸು ಸಚಿವರು ರಾಜ್ಯಕ್ಕೆ ಕೊಡಬೇಕಾಗಿರುವ ಯಾವುದೇ ಪರಿಹಾರ ನಿಧಿ ಬಾಕಿ ಇಲ್ಲವೆಂದು ಹೇಳಿ ರಾಜ್ಯದ ಮನವಿಯನ್ನು ತಿರಸ್ಕರಿಸಿದ ಘಟನೆ ಜನತೆಯ ನೆನಪಿನಲ್ಲಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ಸಂಬಂಧಿಸಿ ರಾಜ್ಯ ಸರ್ಕಾರ ದೆಹಲಿಯಲ್ಲಿ ಸತ್ಯಾಗ್ರಹ ನಡೆಸುವ ಮೂಲಕ ರಾಷ್ಟ್ರದ ಗಮನ ಸೆಳೆಯುವ ಅನಿವಾರ್ಯ ಪರಿಸ್ಥಿತಿಯನ್ನು ಎದುರಿಸಿತ್ತು.
ದೆಹಲಿಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಪ್ರತಿಭಟನೆ ನಡೆಸಿದರೂ ಗಮನ ಕೊಡದೆ ಇದ್ದಾಗ ಅನಿವಾರ್ಯವಾಗಿ ಸುಪ್ರೀಂ ಕೋರ್ಟಿಗೆ ಮೊರೆ ಹೋಗಬೇಕಾಗಿತ್ತು. ಸುಪ್ರೀಂಕೋರ್ಟ್ ಮಧ್ಯಪ್ರವೇಶದಿಂದ ಯಾವುದೇ ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯನ್ನು ಪಡೆಯಬೇಕಾದ ಪರಿಸ್ಥಿತಿ ಒಕ್ಕೂಟ ವ್ಯವಸ್ಥೆಯಲ್ಲಿ ಅಪೇಕ್ಷಣßàಯ ಸಂಗತಿಯಲ್ಲ. ರಾಜ್ಯಗಳಿಂದ ಸಂಗ್ರಹವಾಗುವ ತೆರಿಗೆ ಹಣಕ್ಕೆ ಸೂಕ್ತವಾದ ಪ್ರಮಾಣದಲ್ಲಿ ರಾಜ್ಯಗಳಿಗೆ ತೆರಿಗೆಯ ಪಾಲನ್ನು ನೀಡುವಂತೆ ಹಲವಾರು ವರ್ಷಗಳಿಂದ ಮಾಡುತ್ತಿರುವ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂಬುದು ದಕ್ಷಿಣದ ರಾಜ್ಯಗಳಿಗೆ ನೀಡಿದ ತೆರಿಗೆ ಪಾಲಿನಲ್ಲಿಯೇ ವ್ಯಕ್ತವಾಗುತ್ತಿದೆ.
ರಾಜ್ಯಗಳು ಆರ್ಥಿಕವಾಗಿ ಬಲವಾದರೆ ಕೇಂದ್ರವೂ ಇನ್ನಷ್ಟು ದೃಢವಾಗುತ್ತದೆ. ರಾಜ್ಯಗಳನ್ನು ದುರ್ಬಲಗೊಳಿಸಿದರೆ ಅದರ ಪರಿಣಾಮ ಕೇಂದ್ರದ ಮೇಲೆ ಕೂಡ ಆಗುತ್ತದೆ. ಹತ್ತಾರು ಕಲ್ಯಾಣ ಕಾರ್ಯಕ್ರಮಗಳ ಮೂಲಕ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಿಕೊಂಡಿರುವ ಕರ್ನಾಟಕದಂಥ ಪ್ರಗತಿಪರ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮುಂದುವರಿಸುತ್ತಿರುವುದು ಜನತೆಯಲ್ಲಿಯೂ ಅಸಮಾಧಾನಕ್ಕೆ ಎಡೆ ಮಾಡಿಕೊಡು ತ್ತದೆ. ರಾಜ್ಯಗಳಿಗೆ ನ್ಯಾಯವಾಗಿ ನೀಡಬೇಕಾದ ಪಾಲನ್ನು ರಾಜಕೀಯ ಕಾರಣಗಳಿಗಾಗಿ ಕಡಿತಗೊಳಿಸುವುದು ಅಮಾನವೀಯ ನಡವಳಿಕೆ. ಅದರಲ್ಲಿಯೂ ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಬಿಜೆಪಿ ಸಂಸದರನ್ನು ಗೆಲ್ಲಿಸಿ ಕಳುಹಿಸಿದ ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಕಡಿತಗೊಳಿಸುವುದು ಅನ್ಯಾಯದ ಪರ ಮಾವಧಿ. ತೆರಿಗೆ ಹಂಚಿಕೆಗೆ ಸಂಬಂಧಿಸಿ ರಾಜ್ಯವು ಸಲ್ಲಿಸಿದ ಮನವಿಯನ್ನು ಕೇಂದ್ರವು ಕಡೆಗಣßಸುತ್ತಿರುವುದು ರಾಜ್ಯದ ಜನತೆಯನ್ನು ಅಪಮಾನಿಸಿದಂತೆಯೂ ಆಗುತ್ತಿದೆ.