ಬೆಂಗಳೂರು : ವಿದ್ಯಾಮಂತ್ರಿಗೆ ಕನ್ನಡ ಬರಲ್ಲ’ ಎಂದ ವಿದ್ಯಾರ್ಥಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷೆ ವಿಧಿಸಲು ಸೂಚಿಸಿರುವುದು ಅಕ್ಷಮ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ಷೇಪಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಶಿಕ್ಷಣ ಮಂತ್ರಿಗಳಿಗೆ ಕನ್ನಡ ಬರೋಲ್ಲ ಎಂದು ವಿದ್ಯಾರ್ಥಿಯೊಬ್ಬ ಹೇಳಿದ್ದ.
ತಮಗೆ ಕನ್ನಡ ಬರುತ್ತದೆ. ಈಗೇನು ಉರ್ದು ಮಾತನಾಡುತ್ತಿದ್ದೇನಾ?’ ಎಂದು ಪ್ರಶ್ನಿಸುತ್ತಲೇ ವಿದ್ಯಾರ್ಥಿ ಮೇಲೆ ಗರಂ ಆಗಿದ್ದೂ ಅಲ್ಲದೇ, ಕ್ರಮ ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವುದು ಶಿಕ್ಷಣ ಸಚಿವರ ಬಾಲಿಶತನವನ್ನು ತೋರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
” ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕನ್ನಡ ಬರುತ್ತದೆ ಎನ್ನುತ್ತಲೇ ಆ ವಿದ್ಯಾರ್ಥಿಗೆ ಇಂಗ್ಲೀಷ್ ನಲ್ಲೇ ಶಿಕ್ಷೆಗೆ ಸೂಚಿಸಿದ್ದಾರೆ. ಇದರಿಂದಲೇ ಗೊತ್ತಾಗುತ್ತದೆ ಕನ್ನಡ ಭಾಷೆ, ನಾಡು-ನುಡಿ ಮೇಲೆ ಅವರಿಗಿರುವ ಅಭಿಮಾನ ಎಂತದ್ದು” ಎಂದು ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ