ಹಾಸನ : 2023ರ ಡಿಸೆಂಬರ್ 4ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕಾದಾಡಿ ಮಡಿದ ದಸರಾ ಆನೆ ಕ್ಯಾಪ್ಟನ್ ಅರ್ಜುನನಿಗೆ ಸ್ಮಾರಕ ನಿರ್ಮಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಸರ್ಕಾರ ಪ್ರಾಜೆಕ್ಟ್‌ಗೆ ಅನುಮೋದನೆ ನೀಡಿತ್ತು. ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆಯ ಅರಣ್ಯದಲ್ಲಿ ಹುತಾತ್ಮ ಕಾಡಾನೆ ಅರ್ಜುನನ ಸ್ಮಾರಕ ನಿರ್ಮಾಣ ಪೂರ್ಣಗೊಂಡಿದ್ದು, ಈಗ ಉದ್ಘಾಟನೆಗಾಗಿ ಸ್ಥಳೀಯರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಅರ್ಜುನನ ಸ್ಮಾರಕದಲ್ಲಿ ಮೂಲ ಸೌಕರ್ಯಗಳ ಕೊರತೆ
ಸ್ಥಳೀಯರು 5 ಕೋಟಿ ರೂ. ವೆಚ್ಚದಲ್ಲಿ ಭವ್ಯ ಸ್ಮಾರಕ ನಿರ್ಮಿಸಬೇಕೆಂದು ಆಗ್ರಹಿಸಿದ್ದರು. ಸರ್ಕಾರ ಮೊದಲ ಹಂತದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಶುರುಮಾಡಿತ್ತು. ಇದೀಗ ಮೂಲ ಸೌಲಭ್ಯಗಳ ಕೊರತೆ ಇದ್ದರೂ ಸ್ಮಾರಕ ಉದ್ಘಾಟನೆಗೆ ಸಿದ್ದವಾಗಿದೆ. ಡಿಸೆಂಬರ್ 6 ರಂದು ಹಾಸನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸ್ಮಾರಕ ಲೋಕಾರ್ಪಣೆ ಮಾಡಬೇಕೆಂಬ ಆಗ್ರಹ ಹೊರಹೊಮ್ಮಿದೆ. ಅರ್ಜುನ ಹುತಾತ್ಮನಾಗಿ ಎರಡು ವರ್ಷ ಪೂರ್ತಿಯಾಗುತ್ತಿರುವುದರಿಂದ ಪುತ್ಥಳಿಯ ಉದ್ಘಾಟನೆ ವಿಳಂಬವಾಗಬಾರದೆಂದು ಸ್ಥಳೀಯರು ಹೇಳುತ್ತಿದ್ದಾರೆ.
For More Updates Join our WhatsApp Group :




