ಬೆಂಗಳೂರು : ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಕುರಿತ ತಿಕ್ಕಾಟಕ್ಕೆ ‘ಬ್ರೇಕ್ಫಾಸ್ಟ್ ಮೀಟಿಂಗ್’ ಬ್ರೇಕ್ ಹಾಕಿದೆ. ಇಂದು ಡಿಸಿಎಂ ನಿವಾಸದಲ್ಲಿ ಸಿಎಂಗೆ ಬ್ರೇಕ್ಫಾಸ್ಟ್ ಆಯೋಜನೆಯಾಗಿದೆ. ಆದರೆ, ಮತ್ತೊಂದೆಡೆ, ‘ಕೊಟ್ಟ ಮಾತು’ ಎಂಬ ವಿಚಾರ ಮುನ್ನೆಲೆಗೆ ಬಂದಿದೆ. ಡಿಕೆ ಶಿವಕುಮಾರ್ ಆಪ್ತ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು, ‘ಸಮಯ ಬಂದಾಗ ನಾವು ಒಪ್ಪಿಕೊಂಡಿದ್ದನ್ನು ಬಹಿರಂಗಪಡಿಸುತ್ತೇವೆ’ ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಗಳಲ್ಲಿ ‘ಕೊಟ್ಟ ಮಾತು’ ಬಗ್ಗೆ ಚರ್ಚೆಯಾಗಿದೆ ಎಂದು ಡಿ.ಕೆ. ಶಿವಕುಮಾರ್ ತಮ್ಮ ಆಪ್ತರ ಬಳಿ ಪ್ರಸ್ತಾಪಿಸಿದ್ದರು ಎಂದೂ ವರದಿಯಾಗಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆ, ಕರ್ನಾಟಕ ಕಾಂಗ್ರೆಸ್ ಬಗ್ಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
For More Updates Join our WhatsApp Group :
