ನವದೆಹಲಿ: ಸಂಪ್ರದಾಯದಂತೆ ಸರ್ವಾನುಮತದಿಂದ ಸ್ಪೀಕರ್ ಆಯ್ಕೆ ಮಾಡಲು NDA ನಡೆಸಿದ ಪ್ರಯತ್ನ ಫಲ ನೀಡದ ಕಾರಣ ಲೋಕಸಭೆ ಸ್ಪೀಕರ್ ಹುದ್ದೆಗೆ ಸ್ವಾತಂತ್ರ್ಯ ನಂತರ ಮೊಟ್ಟ ಮೊದಲ ಬಾರಿಗೆ ಚುನಾವಣೆ ನಡೆಯಲಿದೆ.
ಸರ್ವಾನುಮತದಿಂದ ಸ್ಪೀಕರ್ ಆಯ್ಕೆಗೆ INDIA ಕೂಟ ಷರತ್ತನ್ನು ವಿಧಿಸಿತ್ತು. ವಿಪಕ್ಷಗಳಿಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ ನೀಡುವ ಯಾವುದೇ ಭರವಸೆಯನ್ನು NDA ನೀಡದ ಕಾರಣ ಸ್ಪೀಕರ್ ಚುನಾವಣೆಯಲ್ಲಿ ಸ್ಪರ್ಧಿಸಿದೆ
ವಿಪಕ್ಷಗಳೊಡನೆ ರಕ್ಷಣಾಮಂತ್ರಿ ರಾಜನಾಥ್ ಸಿಂಗ್ ಮಂಥನ ನಡೆಸಿದರೂ ಪ್ರಯೋಜನ ಆಗಲಿಲ್ಲ. ಎನ್‌ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ ಇಂಡಿಯಾ ಕೂಟದ ಅಭ್ಯರ್ಥಿಯಾಗಿ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದು ನಾಳೆ ಚುನಾವಣೆ ನಡೆಯಲಿದೆ
INDIA ಕೂಟದ ಅಭ್ಯರ್ಥಿಗೆ ಈವರೆಗೂ ಟಿಎಂಸಿ (TMC) ಬೆಂಬಲ ಸೂಚಿಸಿಲ್ಲ. ನಮ್ಮನ್ನು ಸಂಪರ್ಕಿಸದೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ ಎಂದು ಹೇಳಿದೆ
ಇಂದು ರಾತ್ರಿ ಖರ್ಗೆ ನೇತೃತ್ವದಲ್ಲಿ ಇಂಡಿಯಾ ಕೂಟದ ನಾಯಕರು ಸಭೆ ಸೇರಿದ್ದಾರೆ. ಉಭಯ ಕೂಟಗಳು ತಮ್ಮ ಸಂಸದರಿಗೆ ವಿಪ್ ಜಾರಿ ಮಾಡಿವೆ. ವೈಎಸ್‌ಆರ್ ಪಕ್ಷ ಎನ್‌ಡಿಎ ಅಭ್ಯರ್ಥಿ ಬೆಂಬಲಿಸುವ ಸಂಭವ ಇದೆ. ಬೆಂಬಲ ನೀಡಿದರೆ 4 ಸದಸ್ಯರ ಮತ ಓಂ ಬಿರ್ಲಾ ಅವರಿಗೆ ಬೀಳುವ ಸಾಧ್ಯತೆಯಿದೆ.
ಲೋಕಸಭೆಯಲ್ಲಿ ಉಪ ಸಭಾಪತಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ವಿಪಕ್ಷಗಳು ಆಡಳಿತದಲ್ಲಿರುವ ಯಾವುದೇ ರಾಜ್ಯಗಳಲ್ಲಿ ಎನ್‌ಡಿಎ ಮೈತ್ರಿಗೆ ಡೆಪ್ಯೂಟಿ ಸ್ಥಾನ ನೀಡಿಲ್ಲ. ಸ್ಪೀಕರ್ ಮತ್ತು ಡೆಪ್ಯೂಟಿ ಸ್ಪೀಕರ್ ಹುದ್ದೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿವೆ.