ವಾಷಿಂಗ್ಟನ್: ಈ ಹಿಂದೆ ಚುನಾವಣೆಗಳಲ್ಲಿ ಬಳಸುವ ಇವಿಎಂ ಯಂತ್ರಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಟೆಸ್ಲಾ ಕಂಪನಿ ಸಿಇಒ ಎಲಾನ್ ಮಸ್ಕ್ ಇದೀಗ ಭಾರತದಲ್ಲಿ ಮತ ಎಣಿಕೆಯ ಕುರಿತು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.
ನಿನ್ನೆಯಷ್ಟೇ ಜಾರ್ಖಂಡ್, ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಇದರೊಂದಿಗೆ 14 ರಾಜ್ಯಗಳ 48 ವಿಧಾನಸಭಾ ಕ್ಷೇತ್ರಗಳು ಹಾಗೂ 2 ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಏಣಿಕೆಯೂ ಒಂದೇ ದಿನ ಪೂರ್ಣಗೊಂಡಿದೆ. ಈ ಬೆನ್ನಲ್ಲೇ ಮಸ್ಕ್ ಪ್ರತಿಕ್ರಿಯೆ ನೀಡಿದ್ದಾರೆ.
ಮತದಾನದ 19 ದಿನಗಳ ನಂತರವೂ ಕ್ಯಾಲಿಫೋರ್ನಿಯಾದಲ್ಲಿ (California) ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಅಧಿಕೃತವಾಗಿ ಪ್ರಕಟಿಸದ ಹಿನ್ನೆಲೆಯಲ್ಲಿ ಎಲಾನ್ ಮಸ್ಕ್ ವರದಿಯೊಂದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಮೆರಿಕ ಚುನಾವಣೆಯ ಮತ ಏಣಿಕೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ
ಭಾರತವು ಒಂದೇ ದಿನ 64 ಕೋಟಿ ಮತಗಳನ್ನು ಎಣಿಕೆ ಮಾಡಿದೆ. ಆದ್ರೆ ಕ್ಯಾಲಿಫೋರ್ನಿಯಾದಲ್ಲಿ ಇನ್ನೂ ಎಣಿಕೆ ನಡೆಯುತ್ತಲೇ ಇದೆ ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ ತಲೆ ಬಡಿದುಕೊಳ್ಳುತ್ತಿರುವ (ಕರ್ಮ ಎನ್ನುವಂತೆ) ಎಮೋಜಿಯೊಂದನ್ನ ಹಂಚಿಕೊಂಡಿದ್ದಾರೆ
ಕ್ಯಾಲಿಫೋರ್ನಿಯಾದಲ್ಲಿ 98 ಪ್ರತಿಶತದಷ್ಟು ಮತ ಎಣಿಕೆ ಪೂರ್ಣಗೊಂಡಿದೆ ಆದ್ರೆ ಅಧಿಕೃತ ಪ್ರಕಟಣೆ ಇನ್ನೂ ಬಾಕಿಯಿದೆ. ಅಮೆರಿಕದ ಅತಿದೊಡ್ಡ ನಗರವಾಗಿರುವ ಕ್ಯಾಲಿಪೋರ್ನಿಯಾ ಸುಮಾರು 3.9 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಈ ಕೈಪಿ 1.6 ಕೋಟಿಗಿಂತಲೂ ಅಧಿಕ ಜನ ನವೆಂಬರ್ 5ರಂದು ಮತದಾನದಲ್ಲಿ ಭಾಗಿಯಾಗಿದ್ದರು.
ಈ ಹಿಂದೆ ಚುನಾವಣೆಗಳಲ್ಲಿ ಬಳಸುವ ಇವಿಎಂ ಯಂತ್ರಗಳ ಬಗ್ಗೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ್ದರು. ಹ್ಯಾಕರ್‌ಗಳು ಕೃತಕ ಬುದ್ಧಿಮತ್ತೆ ಬಳಸಿಕೊಂಡು ಇವಿಎಂಗಳನ್ನು ಹ್ಯಾಕ್ ಮಾಡಬಹುದು. ಹಾಗಾಗಿ, ಇವಿಎಂಗಳನ್ನು ಚುನಾವಣೆಯಲ್ಲಿ ಬಳಸಬಾರದು ಎಂದು ಮಸ್ಕ್ ಹೇಳಿದ್ದರು.