ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 199 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ 23,163ಕ್ಕೆ ಏರಿಕೆಯಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಡೆಂಗ್ಯೂ ಪ್ರಕರಣ ದಾಖಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 10,511 ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.
ಬೆಂಗಳೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಶೇಷ ಟಾಸ್ಕ್ ನೀಡಿದ್ದರು. ಇದರ ಹೊರತಾಗಿಯೂ ಬೆಂಗಳೂರಿನಲ್ಲಿ ಡೆಂಗ್ಯೂ ಕೇಸ್ ಹೆಚ್ಚುತ್ತಿದ್ದು, ಪಾಲಿಕೆಗೆ ಹೊಸ ತಲೆನೋವು ಶುರುವಾಗಿದೆ. ಡೆಂಗ್ಯೂ ಕೇಸ್ ನಡುವೆ ಜಿಗಣಿ ವ್ಯಾಪ್ತಿಯಲ್ಲಿ ಝೀಕಾ ವೈರಸ್ ಕೂದ ಹರಡುತ್ತಿದ್ದು, ರಾಜಧಾನಿ ಜನರು ಹೈರಾಣಾಗುತ್ತಿದ್ದಾರೆ.