ಬಾಲ್ಯವಿವಾಹ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಬಾಲ್ಯವಿವಾಹವಷ್ಟೇ ಅಲ್ಲ, ವಿವಾಹಕ್ಕೂ ಪೂರ್ವಭಾವಿಯಾಗಿ ಅಪ್ರಾಪ್ತರಿಗೆ ಮಾಡುವ ನಿಶ್ಚಿತಾರ್ಥವನ್ನು ಶಿಕ್ಷಾರ್ಹವಾಗಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದ್ದು, ಮುಂಬರುವ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನಿಸಿದೆ.
ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜರುಗಿದ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದು, ಇದರೊಂದಿಗೆ ಕರ್ನಾಟಕ ಅಗ್ನಿಶಾಮಕ (ತಿದ್ದುಪಡಿ) ವಿಧೇಯಕ, 2025, ಗಿಗ್ ಕಾರ್ಮಿಕರ ಸುಗ್ರೀವಾಜ್ಞೆ ವಿದೇಯಕ, ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2025 ಹಾಗೂ ವಿವಿಧ ಪ್ರವಾಸಿ, ಧಾರ್ಮಿಕ ತಾಣದ ಅಭಿವೃದ್ಧಿ ಪ್ರಾಧಿಕಾರಗಳಿಗೆ ಕಂದಾಯ ಸಚಿವರನ್ನು ಅಧ್ಯಕ್ಷರನ್ನಾಗಿಸುವ ವಿದೇಯಕ ತಿದ್ದುಪಡಿಗೂ ಸಚಿವ ಸಂಪುಟ ಅನುಮೋದಿಸಿದೆ.

ಕರ್ನಾಟಕ ಅಗ್ನಿಶಾಮಕ ಕಾಯ್ದೆ 1964ರ ಕಲಂ15ಕ್ಕೆ ತಿದ್ದುಪಡಿ ತಂದು ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1ರ ದರದಲ್ಲಿ ಫೈರ್‌ಸೆಸ್ ವಿಧಿಸಲು ಸಂಪುಟ ತೀರ್ಮಾನಿಸಿದ್ದು, ಈಗಾಗಲೇ ಸುಗ್ರೀವಾಜ್ಞೆ ಮೂಲಕ ಚಾಲ್ತಿಯಲ್ಲಿರುವ ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ) ವಿಧೇಯಕ-2025 ಅನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ.
ರಂಗಶAಕರ ಸಂಸ್ಥೆ ಗುತ್ತಿಗೆ ವಿಸ್ತರಣೆ: ನಟ ಶಂಕರ್‌ನಾಗ್ ಸ್ಮರಣೆಯಲ್ಲಿ ಸ್ಥಾಪಿಸಿರುವ ರಂಗಶAಕರ ಸಂಸ್ಥೆ ಜಾಗದ ಗುತ್ತಿಗೆ ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಅನುಮೋದಿಸಿದ್ದು, ಬಿಡಿಎ ವಿಧಿಸಿರುವ ಒಟ್ಟಾರೆ ಗುತ್ತಿಗೆ ಮೌಲ್ಯ / ವರ್ಷಾಸನದ ಶೇ.25 ರಷ್ಟು ಮೊತ್ತವನ್ನು ಮತ್ತು ಅದಕ್ಕೆ ಅನ್ವಯಿಸುವ ಜಿ.ಎಸ್.ಟಿ ಅನ್ನು ಗುತ್ತಿಗೆ ಮೌಲ್ಯವಾಗಿ ಪಾವತಿಸಿಕೊಂಡು ಗುತ್ತಿಗೆ ನವೀಕರಿಸಲು ಅನುಮತಿ ನೀಡಲಾಗಿದೆ.
ಅಲ್ಲೀಪುರ ಗ್ರಾಪಂ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ: ಚಿಕ್ಕಬಳ್ಳಾಪುರ ಜಿಲ್ಲೆಯ ಅಲ್ಲೀಪುರ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸಿ ಅಲ್ಲೀಪುರ ಪಟ್ಟಣ ಪಂಚಾಯಿತಿ ಪ್ರದೇಶವೆಂದು ಉದ್ಘೋಷಿಸಲು; ಸಚಿವ ಸಂಪುಟ ನಿರ್ಧರಿಸಿದೆ.
ಸೂಳೆಕೆರೆ ಆಧುನೀಕರಣ: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೂಳೆಕೆರೆಯ ಜೀರ್ಣೋದ್ಧಾರ ಕಾಮಗಾರಿಯನ್ನು ರೂ.34.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು, ಹಾವೇರಿ ಜಿಲ್ಲೆ, ರಟ್ಟಿಹಳ್ಳಿ ತಾಲ್ಲೂಕು ಮದಗ-ಮಾಸೂರು ಕೆರೆಯ ಎಡದಂಡೆ ಹಾಗೂ ಬಲದಂಡೆ ಮುಖ್ಯ ನಾಲೆಗಳ ಆಧುನೀಕರಣ ಕಾಮಗಾರಿಯನ್ನು ರೂ.52.20 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಇದರೊಂದಿಗೆ ಟಿ.ನರಸೀಪುರ ತಾಲ್ಲೂಕಿನ ನಂಜಾಪುರ ಏತ ನೀರಾವರಿ ಯೋಜನೆಯ ಆಧುನೀಕರಣ ಕಾಮಗಾರಿಗಳನ್ನು ರೂ.20.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.
18 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ: ನಾಗಮಂಗಲ ಶಾಖಾ ನಾಲೆಯ ಹಿರಿಸಾವೆ ಹೋಬಳಿಯ ಚನ್ನರಾಯಪಟ್ಟಣ ತಾಲ್ಲೂಕಿನ 18 ಕೆರೆಗಳಿಗೆ ನೀರು ತುಂಬಿಸುವ ರೂ.74.00 ಕೋಟಿ ಮೊತ್ತದ ಅಂದಾಜು ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಂಪುಟ ಒಪ್ಪಿದೆ.
ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿ: ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗೆ ಸಂಬAಧಿಸಿದAತೆ ಸಾಸ್ಕಿ ಯೋಜನೆಯಡಿ 100 ಕೋಟಿ, ಪ್ರಸಾದ ಯೋಜನೆಯಡಿ 18 ಕೋಟಿ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ನಿಧಿಯಿಂದ 97 ಕೋಟಿ ಪ್ರವಾಸೋದ್ಯಮ ಇಲಾಖೆಯ 15 ಕೋಟಿ ಸೇರಿದಂತೆ 215.37 ಕೋಟಿ ರೂ.ಗಳ ಮೊತ್ತದಲ್ಲಿ ಕೆಟಿಟಿಪಿ ಕಾಯ್ದೆಯಡಿ ಅನುಷ್ಠಾನ ಗೊಳಿಸಲು ಡಿಪಿಎಆರ್ ಗೆ ಸರ್ಕಾರದ ಅನುಮೋದನೆ ನೀಡಲು ಪ್ರವಾಸೋದ್ಯಮ ಇಲಾಖೆಯ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಜಿಲ್ಲಾಧಿಕಾರಿಗಳನ್ನು ಅನುಷ್ಠಾನ ಅಧಿಕಾರಿಯನ್ನಾಗಿ ನೇಮಿಸಲು ಹಾಗೂ ಯೋಜನೆ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಸ್ಟೇಸ್ ಟೆಕ್ನಲ್ಲಿ ಉತ್ಕöÈಷ್ಟತಾ ಕೇಂದ್ರವನ್ನು ಮುಂದಿನ 5 ವರ್ಷಗಳ ಅವಧಿಯಲ್ಲಿ ರೂ. 10.00 ಕೋಟಿಗಳ ಮೊತ್ತದಲ್ಲಿ ಬೆಂಗಳೂರಿನಲ್ಲಿ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಅಭಿವೃದ್ಧಿಗೊಳ್ಳುತ್ತಿರುವ ವಲಯಗಳಲ್ಲಿ ನಾವೀನ್ಯತೆ ಹಾಗೂ ಉದ್ಯಮಶೀಲತೆ ಹೆಚ್ಚಿಸಲು ಐಇಂP (ಐoಛಿಚಿಟ ಇಛಿoಟಿomಥಿ ಂಛಿಛಿeಟeಡಿಚಿಣoಡಿ Pಡಿogಡಿಚಿm) ಯೋಜನೆಯನ್ನು ಮುಂದಿನ 5 ವರ್ಷಗಳ ಅವಧಿಯಲ್ಲಿ ರೂ.1000.00 ಕೋಟಿಗಳ ಮೊತ್ತದಲ್ಲಿ (ಪ್ರತಿ ವರ್ಷ ರೂ.200.00 ಕೋಟಿಗಳು) ನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆಯನ್ನ ಸಚಿವ ಸಂಪುಟ ನೀಡಿದೆ.
ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕವನ್ನು 50.00 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೆಂಗಳೂರಿನ ಇಂದಿರಾಗಾAಧಿ ಮಕ್ಕಳ ಆರೋಗ್ಯ ಸಂಸ್ಥೆಯ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಸ್ಥಾಪಿಸಲು ಹೆಚ್ಚುವರಿಯಾಗಿ ಅವಶ್ಯವಿರುವ ವೈದ್ಯಕೀಯ ಉಪಕರಣ, ಪೀಠೋಪಕರಣ ಹಾಗೂ ಇತರೆ ಬಾಬುಗಳ ಒಟ್ಟಾರೆ ರೂ.62.00 ಕೋಟಿಗಳ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ.
ಸವದತ್ತಿ ತಾಲ್ಲೂಕಿನ ಯುರಗಟ್ಟಿ ಏತನೀರಾವರಿ ಯೋಜನೆಯ ನವೀಕರಣ, ರೇಣುಕಾ ಏತ ನೀರಾವರಿಯ ನವೀಕರಣ ಕಾಮಗಾರಿಗೆ 20 ಕೋಟಿ ರೂಗಳಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ. ಸಾಲಗುಂದ ಏತ ನೀರಾವರಿ ಯೋಜನೆಯನ್ನು ರೂ.178.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ 10 ಕೆರೆಗಳಿಗೆ ನೀರು ತುಂಬಿಸುವ ರೂ..148.80 ಕೋಟಿಗಳ ಮೊತ್ತದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿದ್ದು, ಹಾವೇರಿ ಜಿಲ್ಲೆ, ರಟ್ಟಿಹಳ್ಳಿ ತಾಲ್ಲೂಕು ಮದಗ-ಮಾಸೂರು ಕೆರೆಯ ಎಡದಂಡೆ ಹಾಗೂ ಬಲದಂಡೆ ಮುಖ್ಯ ನಾಲೆಗಳ ಆಧುನೀಕರಣ ಕಾಮಗಾರಿಯನ್ನು ರೂ.52.20 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಹಾಗೂ ಟಿ.ನರಸೀಪುರ ತಾಲ್ಲೂಕಿನ ನಂಜಾಪುರ ಏತ ನೀರಾವರಿ ಯೋಜನೆಯ ಆಧುನೀಕರಣ ಕಾಮಗಾರಿಗಳನ್ನು ರೂ.20.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.
ಕುನ್ಹಾ ವರದಿ ಅಂಗೀಕಾರ; ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳ ವಿರುದ್ಧ ಕಾನೂನುಕ್ರಮ
ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬAಧಿಸಿದAತೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಏಕ ಸದಸ್ಯ ವಿಚಾರಣಾ ಆಯೋಗ ನೀಡಿರುವ ಅವರ ವರದಿಯನ್ನು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಕುನ್ಹಾ ವರದಿಯನ್ವಯ ಆರ್.ಸಿ.ಬಿ, ಡಿ.ಎನ್. ಎ ಎಂಟರ್ ಟೈನ್ ಮೆಂಟ್ ನೆಟ್ ವರ್ಕ್್ಸ ಪ್ರೆöÊವೇಟ್ ಲಿಮಿಟೆಡ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, , ಕೆ ಎಸ್. ಸಿ ಎ ಅಧ್ಯಕ್ಷ ರಘುರಾಮ್ ಭಟ್, ಕೆ ಎಸ್ ಸಿ ಎ ಮಾಜಿ ಅಧ್ಯಕ್ಷ, ಎ ಶಂಕರ್, ಕೆ ಎಸ್ ಸಿ ಎ ಮಾಜಿ ಖಜಾಂಚಿ ಜಯರಾಮ್ ಇ.ಎಸ್, ರಾಜೇಶ್ ಮೆನನ್, ಉಪಾಧ್ಯಕ್ಷರು, ಆರ್.ಸಿ.ಬಿ.ಎಸ್.ಪಿ ಎಲ್, ಡಾ: ವೆಂಕಟವರ್ಧನ್, ಎಂ.ಡಿ. ಡಿಎನ್‌ಎ ಎಂಟರ್ಟೆÊನ್ಮೆAಟ್ ನೆಟ್ ವರ್ಕ್್ಸ ಇವರುಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಂಪುಟ ಸಭೆ ಬಳಿಕೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
880 ಕೋಟಿ ಔಷಧ ಖರೀದಿಗೆ ಅನುಮೋದನೆ:
ಸಾರ್ವಜನಿಕ ಆರೋಗ್ಯ ಸಂಸ್ಥೆಗಳ ಬೇಡಿಕೆಗಳಿಗನುಸಾರವಾಗಿ 890 ಔಷಧಗಳು, ಉಪಭೋಗ್ಯ ವಸ್ತುಗಳು ಹಾಗೂ ರಾಸಾಯನಿಕಗಳನ್ನು ರೂ.880.68 ಕೋಟಿಗಳ ಅಂದಾಜು ವೆಚ್ಚದಲ್ಲಿ ಟೆಂಡರ್ ಮೂಲಕ ಖರೀದಿಗೆ ಅಗತ್ಯ ಅನುದಾನ ಒದಗಿಸಲು ಸಂಪುಟ ಅಸ್ತು ಎಂದಿದೆ.
46 ಜೀವಾವಧಿ ಶಿಕ್ಷಾ ಬಂಧಿಗಳ ಬಿಡುಗಡೆ
ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ ನಮೂದಿಸಿರುವ 46 ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆಗೊಳಿಸಲು ಹಾಗೂ ಕೇಂದ್ರದ ಅನುಮೋದನೆಯೊಂದಿಗೆ ಇತರೆ ಮೂವರು ಶಿಕ್ಷಾಬಂಧಿಗಳ ಬಿಡುಗಡೆಗೆ ಸಚಿವ ಸಂಪುಟ ನಿರ್ಣಯಿಸಿದೆ.