ಬೆಂಗಳೂರು ಸೇರಿ ರಾಜ್ಯದಲ್ಲಿ ಡಾಗ್ ಬೈಟ್ ಆತಂಕ: ನಿಯಂತ್ರಣಕ್ಕೆ ಸಮಗ್ರ ಕ್ರಮಕ್ಕೆ ಒತ್ತಾಯ.!
ಬೆಂಗಳೂರು: ರಾಜ್ಯಾದ್ಯಂತ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸುಪ್ರೆಂ ಕೋರ್ಟ್ನಿಂದ ಸ್ಪಷ್ಟ ಮಾರ್ಗಸೂಚಿಗಳು ಇದ್ದರೂ, ಸ್ಥಳೀಯ ಸಂಸ್ಥೆಗಳು ಸಮರ್ಪಕ ಕ್ರಮ ಕೈಗೊಳ್ಳದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.
ಬೀದಿ ನಾಯಿಗಳಿಗೆ ಆಶ್ರಯ (ಶೆಲ್ಟರ್) ಕಲ್ಪಿಸುವುದು, ಸಂತಾನೋತ್ಪತ್ತಿ ನಿಯಂತ್ರಣ (ಸ್ಟೆರಿಲೈಸೇಶನ್) ಮತ್ತು ಲಸಿಕಾ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕೆಂದು ಸೂಚನೆ ಇದ್ದರೂ, ಜಾರಿಗೆ ಮಾತ್ರ ವಿಳಂಬವಾಗುತ್ತಿದೆ. ಪರಿಣಾಮವಾಗಿ ಪ್ರತಿದಿನವೂ ರಾಜ್ಯದ ವಿವಿಧ ಭಾಗಗಳಿಂದ ಬೀದಿ ನಾಯಿ ಕಡಿತದ ಪ್ರಕರಣಗಳು ವರದಿಯಾಗುತ್ತಿವೆ.
ಬೆಂಗಳೂರಿನ ಜಿಬಿಎ ವ್ಯಾಪ್ತಿಯಲ್ಲೇ ಸದ್ಯ ಸುಮಾರು 2 ಲಕ್ಷ 79 ಸಾವಿರ ಬೀದಿ ನಾಯಿಗಳಿವೆ ಎನ್ನಲಾಗಿದೆ. ಕಳೆದ ಆರು ತಿಂಗಳಲ್ಲಿ ಮಾತ್ರ ನಗರದಲ್ಲಿ 13,821 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. ಇದು ನಗರದಲ್ಲಿ ಪರಿಸ್ಥಿತಿ ಎಷ್ಟರ ಮಟ್ಟಿಗೆ ಗಂಭೀರವಾಗಿದೆ ಎಂಬುದನ್ನು ತೋರಿಸುತ್ತದೆ..
ಬೆಂಗಳೂರು, ಮೇ 6- ರಾಜ್ಯಾದ್ಯಂತ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸುಪ್ರೆಂ ಕೋರ್ಟ್ನಿಂದ ಸ್ಪಷ್ಟ ಮಾರ್ಗಸೂಚಿಗಳು ಇದ್ದರೂ, ಸ್ಥಳೀಯ ಸಂಸ್ಥೆಗಳು ಸಮರ್ಪಕ ಕ್ರಮ ಕೈಗೊಳ್ಳದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.
For More Updates Join our WhatsApp Group :




