ನಿಗಮ–ಮಂಡಳಿ–ಪ್ರಾಧಿಕಾರ ಅಧ್ಯಕ್ಷರ ಅವಧಿ ವಿಸ್ತರಣೆ.

ನಿಗಮ–ಮಂಡಳಿ–ಪ್ರಾಧಿಕಾರ ಅಧ್ಯಕ್ಷರ ಅವಧಿ ವಿಸ್ತರಣೆ.

ಮಹತ್ವದ ಸರ್ಕಾರ ಆದೇಶ

ಬೆಂಗಳೂರು : ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನಗೊಂಡಿದ್ದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಆದೇಶ ಮಾಡಲಾಗಿದೆ. ಈಗಾಗಲೇ ಅವಧಿ ಮುಕ್ತಾಯಗೊಂಡ ಮತ್ತು ಮುಕ್ತಾಯಗೊಳ್ಳಲಿರುವ ಪ್ರಾಧಿಕಾರಗಳ ಅಧ್ಯಕ್ಷರುಗಳ ಇದು ಅನ್ವಯವಾಗಲಿದ್ದು, ಅಧ್ಯಕ್ಷರು ಕಾರ್ಯನಿರ್ವಹಿಸಲು ಅಧಿಸೂಚನೆ ಹೊರಡಿಸುವಂತೆ ಸೂಚನೆ ನೀಡಲಾಗಿದೆ.

ಆದೇಶದಲ್ಲಿ ಏನಿದೆ?

ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನಾಮನಿರ್ದೇಶನಗೊಂಡ ಅಧ್ಯಕ್ಷರುಗಳ ಮುಕ್ತಾಯಗೊಂಡ/ಮುಕ್ತಾಯಗೊಳ್ಳಲಿರುವ ಅವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಲಾಗಿದೆ. ಈ ಆದೇಶದ ಅನ್ವಯ ಆಡಳಿತ ಇಲಾಖೆಯ ಸಂಬಂಧಿಸಿದ ಅಧಿನಿಯಮ/ನಿಯಮಗಳ ರೀತಿ ತಕ್ಷಣದಿಂದ ಅಧ್ಯಕ್ಷರು ಕಾರ್ಯನಿರ್ವಹಿಸಲು ಸೂಕ್ತ ಅಧಿಸೂಚನೆ ಹೊರಡಿಸುವಂತೆ ಆಡಳಿತ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಉಪ ಕಾರ್ಯದರ್ಶಿ ಅಭಿಜಿನ್​​ ಬಿ. ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಕೆಲವು ಕಾಡಾ ಅಭಿವೃದ್ಧಿ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರದ ಅಧ್ಯಕ್ಷರ ಅವಧಿಯನ್ನು ಮುಂದುವರೆಸಿ ಆದೇಶ ಹೊರಡಿಸುವಂತೆ ಕೋರಿ ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಪತ್ರ ಬರೆದಿದ್ದರು. ವಿವಿಧ ಪ್ರಾಧಿಕಾರದ ಅಧ್ಯಕ್ಷರು ಹಾಗೂ ನಿಗಮ ಮಂಡಳಿಗಳಿಗೆ ಡಿಸಿಸಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರುಗಳನ್ನು ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವೆರೆಗೆ ನೇಮಕ ಮಾಡಲಾಗಿದ್ದು, ಫೆ.7ರ ಆದೇಶದ ಪಟ್ಟಿಯಲ್ಲಿರುವ ಕೆಲವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಮುಂದಿನ ಆದೇಶದವೆರೆಗೆ ಅವರನ್ನು ವಿಸ್ತರಣೆ ಮಾಡಲಾಗಿದೆ. ಆದರೆ ಇದರಲ್ಲಿ ಕಾಡಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರುಗಳನ್ನು ಮತ್ತು ಯೋಜನಾ ಅಧ್ಯಕ್ಷರುಗಳನ್ನು ಕೈಬಿಡಲಾಗಿದೆ. ಪ್ರಸ್ತುತ ಈ ಪ್ರಾಧಿಕಾರಗಳಿಗೆ ಬೇರೆ ಅಧ್ಯಕ್ಷರನ್ನು ನೇಮಕ ಮಾಡಿಲ್ಲವಾದ್ದರಿಂದ ಮುಂದಿನ ಆದೇಶದವರೆಗೆ ಅಥವಾ ನೇಮಕ ಮಾಡುವವರೆಗೆ ಅವರನ್ನೇ ಮುಂದುವರಿಸವಂತೆ ಡಿಕೆಶಿ ಆಗ್ರಹಿಸಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *