ಫಾಕ್ಸ್‌ಕಾನ್ ಘಟಕದಲ್ಲಿ ಭ್ರೂ* ಪತ್ತೆ: 19 ವರ್ಷದ ಯುವತಿ ಬಂಧನ.

ಫಾಕ್ಸ್‌ಕಾನ್ ಘಟಕದಲ್ಲಿ ಭ್ರೂ* ಪತ್ತೆ: 19 ವರ್ಷದ ಯುವತಿ ಬಂಧನ.

ಹೊಸೂರು ರಸ್ತೆ ಆಘಾತಕಾರಿ ಘಟನೆ

ಬೆಂಗಳೂರು: ಸಿಲಿಕಾನ್ ಸಿಟಿಯ ಹೊಸೂರು ರಸ್ತೆಯಲ್ಲಿರುವ ಪ್ರಸಿದ್ಧ ಆಪಲ್ ಫೋನ್ ಉತ್ಪಾದನಾ ಘಟಕದ (ಫಾಕ್ಸ್‌ಕಾನ್) ಆವರಣದಲ್ಲಿ ಭ್ರೂಣವೊಂದು ಪತ್ತೆಯಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಘಟಕದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಖಾನೆಯ ಶೌಚಾಲಯದ ಬ್ಲಾಕ್‌ನಲ್ಲಿ ಶುಚಿಗೊಳಿಸುವ ಸಿಬ್ಬಂದಿಗೆ ಭ್ರೂಣವೊಂದು ಪತ್ತೆಯಾಗಿತ್ತು. ಕೂಡಲೇ ಅವರು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರಿಗೆ ದೂರು ನೀಡಲಾಯಿತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳನ್ನು ಬಂಧನ ಮಾಡಲಾಗಿದೆ. ಘಟನೆ ನಡೆದ ಸಮಯದಲ್ಲಿ ಶೌಚಾಲಯದ ಕಡೆಗೆ ಹೋದವರ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ, ಅಲ್ಲಿನ ಸಿಬ್ಬಂದಿಯೊಬ್ಬರ ಮೇಲೆ ಅನುಮಾನ ವ್ಯಕ್ತಪಡಿಸಿದರು. ಈ ಬಗ್ಗೆ ತನಿಖೆ ನಡೆಸಿದಾಗ ಪೊಲೀಸರಿಗೆ ಅಚ್ಚರಿಯ ವಿಚಾರವೊಂದು ತಿಳಿಯಿತು. 19 ವರ್ಷದ ಯುವತಿಯು ಈ ಕೃತ್ಯ ಎಸಗಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆಕೆಯನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

ಈ ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ?

ಶೌಚಾಲಯದ ಪೈಪ್ ಬ್ಲಾಕ್ ಆಗಿದ್ದರಿಂದ ಶುಚಿಗೊಳಿಸುವ ಸಿಬ್ಬಂದಿ ಪರೀಕ್ಷಿಸಿದಾಗ ಮಗುವಿನ ದೇಹ ಪತ್ತೆಯಾಗಿದೆ. ಇದನ್ನು ಕಂಡು ಬೆಚ್ಚಿಬಿದ್ದ ಸಿಬ್ಬಂದಿ ಕೂಡಲೇ ಆಡಳಿತ ಮಂಡಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಾಗೂ ಅಲ್ಲಿನ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ 19 ವರ್ಷದ ಯುವತಿಯ ಮೇಲೆ ಅನುಮಾನ ವ್ಯಕ್ತವಾಗಿತ್ತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *