ಬೆಂಗಳೂರು: ಭಾನುವಾರ ಸಾವನ್ನಪ್ಪಿದ ನಿರ್ದೇಶಕ ಗುರು ಪ್ರಸಾದ್ ಸಾಲದ ಶೂಲಕ್ಕೆ ಬಲಿಯಾಗಿದ್ದಾರೆ ಎಂಬ ವದಂತಿ ಕೇಳಿಬರುತ್ತಿದೆ.
ಹೌದು.. ಇಂದು ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನಿರ್ದೇಶಕ ಗುರು ಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಸಾವಿಗೆ ಸಾಲ ಕಾರಣ ಎಂದು ಹೇಳಲಾಗಿದೆ. ಈ ಹಿಂದೆ ನಿರ್ದೇಶಕ ಗುರು ಪ್ರಸಾದ್ ರಂಗನಾಯಕ ಚಿತ್ರ ನಿರ್ದೇಶಿಸಿದ್ದರು.
ಇದನ್ನು ಓದಿ : ‘ಮಠ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮ**ತ್ಯೆ
ಈ ಚಿತ್ರ ಹೀನಾಯವಾಗಿ ಸೋತಿತ್ತು. ಇದರ ಬೆನ್ನಲ್ಲೇ ಗುರು ಪ್ರಸಾದ್ ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ.
ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲದ ಶೂಲಕ್ಕೆ ಸಿಲುಕಿದ್ದರು. ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು. ಇತ್ತೀಚಿನ ದಿನಗಳಲ್ಲಿ ನಿರ್ದೇಶಕ ಗುರುಪ್ರಸಾದ್ ಸಾಕಷ್ಟು ಆರ್ಥಿಕ ಮುಗ್ಗಟ್ಟಿಗೆ ತುತ್ತಾಗಿದ್ದರು. ಅವರ ಬಳಿ ಕೆಲಸ ಮಾಡುತ್ತಿದ್ದವರಿಂದಲೇ ಗುರುಪ್ರಸಾದ್ ಹಣ ಪಡೆದುಕೊಂಡು ವಾಪಸ್ ನೀಡಿರಲಿಲ್ಲ ಎಂಬ ಆರೋಪಗಳೂ ಕೇಳಿಬಂದಿತ್ತು.