ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಳವಾಗಿವೆ. ಹೀಗಾಗಿ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಈ ಮಧ್ಯೆ ಬಾಂಬ್ ಬೆದರಿಕೆ ಕರೆಗಳ ಕಾಟ ಇದೀಗ ಮತ್ತೊಂದು ಹಂತಕ್ಕೆ ತಲುಪಿದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮನೆಗೇ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಹುಸಿ ಬಾಂಬ್ ಬೆದರಿಕೆ ಪ್ರಕರಣ ಹೆಚ್ಚಳ ಹಿನ್ನೆಲೆ ಬುಧವಾರವಷ್ಟೇ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮನೆಗೇ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆ ಮೂಲಕ ಬಾಂಬ್ ಬೆದರಿಕೆ ಕಾಟ ಇದೀಗ ಮತ್ತೊಂದು ಮಜಲಿಗೆ ತಲುಪಿದೆ. ತಮಿಳುನಾಡಿನ ವ್ಯಕ್ತಿಯೋರ್ವನಿಂದ ಬೆದರಿಕೆ ಸಂದೇಶ ಕಳುಹಿಸಿರುವ ಅನುಮಾನಗಳು ವ್ಯಕ್ತವಾಗಿದ್ದು, ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
For More Updates Join our WhatsApp Group :
