KRS ನಲ್ಲಿ ನೀರಿನ ಮಟ್ಟ ಕುಸಿತ : ಭುಗಿಲೆದ್ದ ಆಕ್ರೋಶ..!

ಮಂಡ್ಯ: ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದು, KRS ಜಲಾಶಯದ ನೀರಿನ ಮಟ್ಟ 96.90 ಅಡಿಗೆ ಕುಸಿದಿದೆ.

KRS

ನಿನ್ನೆ ತಮಿಳುನಾಡಿಗೆ 2,673 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು, ಇಂದು 3,000 ಕ್ಯೂಸೆಕ್‌ಗೆ ಏರಿಕೆಯಾಗಿದೆ. ತಮಿಳುನಾಡಿಗೆ KRSನಿಂದ ಬಿಡುಗಡೆ ಮಾಡಲಾದ ನೀರಿನ ಪ್ರಮಾಣದಲ್ಲಿ 300 ಕ್ಯೂಸೆಕ್‌ನಷ್ಟು ಹೆಚ್ಚುವರಿ ನೀರು ಹರಿಸಲಾಗಿದೆ. 

ಮತ್ತೊಂಡೆದೆ KRS ಜಲಾಶಯದ ಹೊರ ಹರಿವಿನ ಪ್ರಮಾಣ ಹೆಚ್ಚಾಗಿದ್ದರೂ ಒಳಹರಿವಿನ ಪ್ರಮಾಣ ಮಾತ್ರ ಕಡಿಮೆಯಾಗಿದೆ. ನಿನ್ನೆ 5,845 ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ ಇಂದು 5,147 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಇದರಿಂದ 124.80 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದ ಮಟ್ಟ 96.90 ಅಡಿಗೆ ಕುಸಿದಿದೆ. 

KRSನ ನೀರಿನ ಮಟ್ಟ
ಗರಿಷ್ಟ ಮಟ್ಟ: 124.80 ಅಡಿಗಳು
ಇಂದಿನ ಮಟ್ಟ: 96.90 ಅಡಿಗಳು
ಗರಿಷ್ಠ ಸಂಗ್ರಹ: 49.452 ಟಿಎಂಸಿ
ಇಂದಿನ ಸಂಗ್ರಹ: 20.477 ಟಿಎಂಸಿ
ಒಳಹರಿವು: 5,147 ಕ್ಯೂಸೆಕ್
ಹೊರಹರಿವು: 6,034 ಕ್ಯೂಸೆಕ್

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *