ಮಿಸ್ಸಿಂಗ್ ದೂರು ಕೊಡಲು ಹೋಗಿ ಸತ್ಯ ಬಾಯ್ಬಿಟ್ಟ ಪುತ್ರ.
ವಿಜಯನಗರ: ಹೆತ್ತ ತಂದೆ-ತಾಯಿ ಮತ್ತು ಒಡಹುಟ್ಟಿದ ಸಹೋದರಿಯನ್ನೇ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಅಕ್ಷಯ ಕುಮಾರ ಕೊಲೆ ಮಾಡಿದ ವ್ಯಕ್ತಿ. ಕೊಲೆಗೈದ ಅಕ್ಷಯ ಕುಮಾರ ಬೆಂಗಳೂರುಗೆ ತೆರಳಿ ತಂದೆ, ತಾಯಿ ಮತ್ತು ಸಹೋದರಿ ನಾಪತ್ತೆ ಆಗಿದ್ದಾರೆ ಎಂದು ಬೆಂಗಳೂರಿನ ತಿಲಕ್ನಗರ ಠಾಣೆಗೆ ದೂರು ನೀಡಿದ್ದ. ಮೃತರ ಹೆಸರು ಮತ್ತು ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಪೊಲೀಸ್ ವಿಚಾರಣೆ ವೇಳೆ ಅಸಲಿ ಸತ್ಯ ಬಾಯ್ಬಿಟ್ಟ ಪುತ್ರ
ಇನ್ನು ಅನುಮಾನಗೊಂಡ ತಿಲಕ್ನಗರ ಠಾಣೆ ಪೊಲೀಸರು ಪುತ್ರನ ವಿಚಾರಣೆ ಮಾಡಿದ್ದಾರೆ. ಈ ವೇಳೆ ಕೊಲೆ ಬಗ್ಗೆ ಅಸ್ಪಷ್ಟ ಹೇಳಿಕೆ ನೀಡಿದ್ದಾನೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನ ಮನೆಯಲ್ಲಿ ಮೂವರನ್ನು ಕೊಂದು ಹೂತಿದ್ದಾಗಿ ಒಮ್ಮೆ ಹೇಳಿಕೆ ನೀಡಿದರೆ, ಮತ್ತೊಮ್ಮೆ ಸಂಡೂರಲ್ಲಿ ಶವ ಎಸೆದಿರುವುದಾಗಿ ಹೇಳಿಕೆ ನೀಡಿದ್ದಾನೆ.
ಸದ್ಯ ವ್ಯಕ್ತಿ ನೀಡಿದ ಅಸ್ಪಷ್ಟ ಹೇಳಿಕೆ ಬಗ್ಗೆ ಕೊಟ್ಟೂರು ಠಾಣೆಗೆ ತಿಲಕ್ನಗರ ಠಾಣೆ ಪೊಲೀಸರಿಂದ ಮಾಹಿತಿ ನೀಡಿದ್ದು, ಆ ಮಾಹಿತಿ ಆಧರಿಸಿ ವ್ಯಕ್ತಿ ಹೇಳಿರುವ ಸ್ಥಳದಲ್ಲಿ ಶವಗಳಿಗಾಗಿ ಕೊಟ್ಟೂರು ಠಾಣೆ ಪೊಲೀಸರು ಶೋಧ ನಡೆಸಿದ್ದಾರೆ.
ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ಪ್ರಾಧ್ಯಾಪಕ ಸಾವು
ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ ಸಾವನ್ನಪ್ಪಿದ್ದಾರೆ. ಕಲಬುರಗಿ ನಗರದ ಹೊಸ ಆರ್ಟಿಒ ಕಚೇರಿ ಬಳಿ ಘಟನೆ ನಡೆದಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅಧ್ಯಾಪಕರ ಬೇಡಿಕೆಗಾಗಿ ವಿವಿಧ ಹೋರಾಟಗಳಲ್ಲಿ ಭಾಗಿಯಾಗಿದ್ದರು.
For More Updates Join our WhatsApp Group :




