ಮೈಸೂರು: ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಿನ್ನೆ ಹುಲಿ ದಾಳಿಯಿಂದ ರೈತ ರಾಜಶೇಖರ(58) ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ರೈತರು ಘೇರಾವ್ ಹಾಕಿರುವ ಪ್ರಸಂಗ ನಡೆದಿದೆ.
ರೈತ ರಾಜಶೇಖರ ಅವರ ಶವ ಇದ್ದ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಚಿವರು ಭೆಟಿ ನೀಡಿದ್ದರು. ಈ ವೇಳೆ ಘೇರಾವ್ ಹಾಕಲಾಗಿದ್ದು, ಸಂಬಂಧಪಟ್ಟ ಅರಣ್ಯ ಅಧಿಕಾರಿಗಳ ಅಮಾನತು ಮಾಡಬೇಕು. ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಬೇಕೆಂದು ಆಗ್ರಹಿಸಲಾಗಿದೆ.
For More Updates Join our WhatsApp Group :
