ಆಲಮಟ್ಟಿಯಲ್ಲಿ ಎಂಡಿ ಕಚೇರಿ ಮೇಲೆ ಕ್ರಮ.
ಆಲಮಟ್ಟಿ : ಆಲಮಟ್ಟಿ ಕೃಷ್ಣಾ ಮೇಲ್ದಂಡೆ ಯೋಜನೆ ಕಾಲುವೆ ನಿರ್ಮಾಣಕ್ಕೆ ಜಮೀನು ನೀಡಿದ್ದ ರೈತರಿಗೆ ಸೂಕ್ತ ಪರಿಹಾರ ನೀಡದ ಹಿನ್ನೆಲೆಯಲ್ಲಿ, ವಿಜಯಪುರದ 1ನೇ ಹೆಚ್ಚುವರಿ ನ್ಯಾಯಾಲಯದ ಆದೇಶದಂತೆ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯನ್ನು ಜಪ್ತಿ ಮಾಡಲಾಗಿದೆ. ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ರೈತ ಮಹಾದೇವ ಲಿಗಾಡೆ ಹಾಗೂ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಅಕ್ರುಸಾಬ ಮುಲ್ಲಾ ಸೇರಿದಂತೆ ಹಲವಾರು ರೈತರ ಜಮೀನನ್ನು ಕಾಲುವೆ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ, ವರ್ಷಗಳು ಕಳೆದರೂ ಸರ್ಕಾರ ಹಾಗೂ ಅಧಿಕಾರಿಗಳು ಸೂಕ್ತ ಪರಿಹಾರ ನೀಡಿರಲಿಲ್ಲ.
ಇದರಿಂದ ಆಕ್ರೋಶಗೊಂಡ ರೈತರು ನ್ಯಾಯದಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯ ನೀಡಿದ್ದ ಗಡುವನ್ನು ಅಧಿಕಾರಿಗಳು ಪದೇ ಪದೇ ಉಲ್ಲಂಘಿಸಿದ ಕಾರಣ, ಇಂದು ಆಲಮಟ್ಟಿಯಲ್ಲಿರುವ ಎಂಡಿ ಕಚೇರಿಯ ಮೇಲೆ ದಾಳಿ ನಡೆಸಿ 1 ಇನ್ನೋವಾ ಕಾರು ಮತ್ತು 1 ಜೀಪು, 20 ಕುರ್ಚಿಗಳು ಮತ್ತು 22 ಟೇಬಲ್‌ಗಳು, 10 ಕಂಪ್ಯೂಟರ್‌ಗಳು ಸೇರಿದಂತೆ ಇತರೆ ಕಚೇರಿ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.
For More Updates Join our WhatsApp Group :




