ತುಮಕೂರು ಜಿಲ್ಲೆಯ ರೈತರು ಅಕ್ಟೋಬರ್ 21 ಯಾವುದೇ ಕಾರಣಕ್ಕೂ ಮರೆಯಬೇಡಿ..?

ತುಮಕೂರು ಜಿಲ್ಲೆಯ ರೈತರು ಅಕ್ಟೋಬರ್ 21 ಯಾವುದೇ ಕಾರಣಕ್ಕೂ ಮರೆಯಬೇಡಿ..?

ತುಮಕೂರು :  ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20ರವರೆಗೆ ಹಸು, ಎಮ್ಮೆ, ಹಂದಿ ಸೇರಿ ಎಲ್ಲಾ ಜಾನುವಾರುಗಳಿಗೆ ಕಾಲು-ಬಾಯಿ ಜ್ವರ ಲಸಿಕೆ ನೀಡುವ  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪಶುಪಾಲಕರ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಸಂಜೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ 5 ಲಕ್ಷ ಜಾನುವಾರುಗಳಿದ್ದು,  ಪಶುಪಾಲನಾ ಇಲಾಖಾ ಸಿಬ್ಬಂದಿ, ಹಾಲು ಉತ್ಪಾದಕ ಸಹಕಾರ ಸಂಘಗಳ ಸಿಬ್ಬಂದಿ, ಮೈತ್ರಿ ಕಾರ್ಯಕರ್ತರು ಹಾಗೂ ಪಶುಸಖಿಯರು ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಶೇ. 100ರಷ್ಟು ಲಸಿಕೆ ನೀಡಬೇಕು ಎಂದು ತಿಳಿಸಿದರು.

ಲಸಿಕೆ ನೀಡುವುದರಿಂದ ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ಜ್ವರವನ್ನು ನಿಯಂತ್ರಿಸಬಹುದು. ಈ ನಿಟ್ಟಿನಲ್ಲಿ ಲಸಿಕಾ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಎಲ್ಲಾ ರೈತರು, ಪಶುಪಾಲಕರು, ಜಾನುವಾರು ಸಾಕಾಣಿಕೆದಾರರಿಗೆ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

Leave a Reply

Your email address will not be published. Required fields are marked *