ಕಬ್ಬಿನ ಹಣಕ್ಕೆ ರೈತರ ಹೋರಾಟ.

ಕಬ್ಬಿನ ಹಣಕ್ಕೆ ರೈತರ ಹೋರಾಟ.

 ಹಣ ಕೊಡದೇ ಕಾರ್ಖಾನೆ ಮಾಲೀಕರ ಕಳ್ಳಾಟ

ಬೀದರ್​​: ಕಬ್ಬು ಬೆಳೆದು ಖುಷಿಯಿಂದ ಸಕ್ಕರೆ ಕಾರ್ಖಾನೆಗೆ ರೈತರು ಕಬ್ಬು ಹಾಕುತ್ತಿದ್ದಾರೆ. ಆದರೆ ರೈತರಿಗೆ ಸಕ್ಕರೆ ಕಾರ್ಖಾನೆಯಿಂದ ಬರಬೇಕಾದ ಹಣ ಮಾತ್ರ ಸಮಯಕ್ಕೆ ಸರಿಯಾಗಿ ಕೈ ಸೇರುತ್ತಿಲ್ಲ. ವರ್ಷವಿಡೀ ಕಷ್ಟಪಟ್ಟು ಬೆಳೆದ ಕಬ್ಬನ್ನ ಕಾರ್ಖಾನೆಗೆ ಹಾಕಿದರೆ ಕಾರ್ಖಾನೆಯ ಮಾಲೀಕರು ಮಾತ್ರ ರೈತರಿಗೆ ಹಣ ಕೊಡದೇ ಸತಾಯಿಸುತ್ತಿದ್ದಾರೆ. ಇದನ್ನ ಪ್ರಶ್ನಿಸಬೇಕಾದ ಅಧಿಕಾರಿಗಳು ಮಾತ್ರ ಕಂಡುಕಾಣದಂತೆ ಕುಳಿತಿದ್ದು, ರೈತರ ಆಕ್ರೋಶ ಹೆಚ್ಚಿಸುವಂತೆ ಮಾಡಿದೆ.

ಬೀದರ್ ಜಿಲ್ಲೆಯಲ್ಲಿರುವ ಐದು ಸಕ್ಕರೆ ಕಾರ್ಖಾನೆಗಳಿಂದ ಪ್ರಸಕ್ತ ಹಂಗಾಮು ವರ್ಷದಲ್ಲಿ ಕೋಟ್ಯಂತರ ರೂ ಹಣ ರೈತರ ಕೈ ಸೇರಬೇಕಾಗಿದೆ. ಕಾರ್ಖಾನೆಯ ಮಾಲೀಕರು ಕೆಲವು ರೈತರಿಗೆ ಮಾತ್ರ ಹಣನ್ನ ಹಾಕಿ ಸುಮ್ಮನಾಗಿದ್ದು, ಇತರರಿಗೆ ಹಣ ಬಾರದಿರುವುದರಿಂದ ಸಾಲ ಮಾಡಿ ಜೀವನ ನಡೆಸಬೇಕಾದ ಸ್ಥಿತಿ ರೈತರದ್ದಾಗಿದೆ.

ಸಾಲ ಸೂಲಾ ಮಾಡಿ ಬೆಳೆದ ಕಬ್ಬನ್ನ ಮಾರಾಟ ಮಾಡಿದರೇ ಅದರ ಹಣವನ್ನ ಮಾತ್ರ ರೈತರಿಗೆ ಕೊಡುತ್ತಿಲ್ಲ. ಹೀಗಾಗಿ ರೈತರು ಮಾತ್ರ ಕಬ್ಬಿನ ಹಣ ಬರುತ್ತದೆ ಎಂದು ಮತ್ತೆ ಸಾಲ ಮಾಡಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಹಾಕಿ ಎರಡು ತಿಂಗಳಾದರೂ ರೈತರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಇದು ಸಹಜವಾಗಿಯೇ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ವರ್ಷವಿಡೀ ಕಬ್ಬನ್ನ ಬೆಳೆಸಿದ್ದೇವೆ, ಗೊಬ್ಬರ ಬೀಜ ಹೀಗೆ ಹತ್ತಾರು ಕಡೆಗಳಲ್ಲಿ ಸಾಲ ಮಾಡಿಕೊಂಡಿದ್ದೇವೆ. ಕಬ್ಬು ಮಾರಾಟದಿಂದ ಬಂದ ಹಣದಲ್ಲಿ ಸಾಲ ತೀರಿಸಬೇಕು. ಆದರೆ ಸಕ್ಕರೆ ಕಾರ್ಖಾನೆಯವರು ಮಾತ್ರ ರೈತರಿಗೆ ಕೊಡಬೇಕಾದ ಹಣ ಕೊಟ್ಟಿಲ್ಲ. ಹೀಗಾಗಿ ಕಾರ್ಖಾನೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಬ್ಬು ಬೆಳೆಗಾರ ಚಾಂದಪಾಷಾ ಅವರು ಅಳಲು ತೊಡಿಕೊಂಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *