ತ್ರಾಸಿ ಬೀಚ್ ಸಮೀಪ ನಿಯಂತ್ರಣ ತಪ್ಪಿದ ಬಸ್ ಟ್ಯಾಂಕರ್–ಟ್ರಕ್ಗೆ ಗುದ್ದಾಟ; ಹಲವರಿಗೆ ಗಂಭೀರ ಗಾಯ
ಉಡುಪಿ: ಕರಾವಳಿ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಸಮೀಪ ಭೀಕರ ಅಪಘಾತಕ್ಕೀಡಾಗಿ, ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುರುಡೇಶ್ವರ ದರ್ಶನ ಮುಗಿಸಿ ಉಡುಪಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮೊದಲು ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ಗೆ ಡಿಕ್ಕಿ ಹೊಡೆದು, ನಂತರ ಟ್ರಕ್ಗೆ ರಭಸವಾಗಿ ಗುದ್ದಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.ಘಟನೆ ನಂತರ ಸ್ಥಳೀಯರು ಮತ್ತು ಪೊಲೀಸರು ತಕ್ಷಣ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.
ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣಕ್ಕಾಗಿ ತನಿಖೆ ಮುಂದುವರೆದಿದೆ.
For More Updates Join our WhatsApp Group :




