ಮಹಾರಾಷ್ಟ್ರದಲ್ಲಿ ಭೀಕರ ಬಸ್–ಆಟೋ ಅಪಘಾತ.

ಮಹಾರಾಷ್ಟ್ರದಲ್ಲಿ ಭೀಕರ ಬಸ್–ಆಟೋ ಅಪಘಾತ.

ಶಾಲಾ ಮಕ್ಕಳ ಸಹಿತ ನಾಲ್ವರು ಸ್ಥಳದಲ್ಲೇ ಸಾ*; ಮೂವರು ಗಂಭೀರ ಗಾಯ

ಅಮರಾವತಿ: ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಸೇರಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಾಗ್ಪುರಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ವರುದ್-ರಾಜುರಾ ಬಜಾರ್ ರಸ್ತೆಯಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ. ಈ ಭೀಕರ ಅಪಘಾತದ ನಂತರ ಆ ಪ್ರದೇಶದಲ್ಲಿ ಕೋಲಾಹಲ ಉಂಟಾಗಿದ್ದು, ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ, ಅಮರಾವತಿ ಜಿಲ್ಲೆಯ ವರುದ್ ತಾಲೂಕಿನ ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳು ರಿಕ್ಷಾದಲ್ಲಿ ಕೆಲವು ಸ್ಥಳೀಯ ನಾಗರಿಕರು ಕೂಡ ಇದ್ದರು.

ಪ್ರಯಾಣಿಕರಿಂದ ತುಂಬಿದ್ದ ಆಟೋಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಎಷ್ಟು ಭೀಕರವಾಗಿತ್ತೆಂದರೆ ರಿಕ್ಷಾ ತುಂಡು ತುಂಡಾಗಿ ಬಿದ್ದಿತ್ತು. ರಿಕ್ಷಾದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಶಾಲಾ ಮಕ್ಕಳೂ ಸೇರಿದ್ದಾರೆ. ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮತ್ತೊಂದು ಘಟನೆ ಯಾವತ್ಮಲ್ ಜಿಲ್ಲೆಯ ಅರ್ನಿ ಬಸ್ ನಿಲ್ದಾಣದಲ್ಲಿ ಅಪಘಾತವೊಂದು ಸಂಭವಿಸಿದೆ. ಯಾವತ್ಮಲ್​ನಿಂದ ಪುಸಾದ್ ಮಾರ್ಗವಾಗಿ ಚಲಿಸುತ್ತಿದ್ದ ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ನಿಲ್ದಾಣದಲ್ಲಿರುವ ಪಿಲ್ಲರ್​ಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ ಪ್ರಯಾಣಿಕರಿದ್ದ ಪರಿಣಾಮ ಆ ಪ್ರದೇಶಲ್ಲಿ ಗದ್ದಲ ಉಂಟಾಯಿತು. ಆದರೆ ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪ್ರಯಾಣಿಕರನ್ನು ಇಳಿಸಲು ಬಸ್ ನಿಲ್ದಾಣಕ್ಕೆ ಪ್ರವೇಶಿಸುತ್ತಿದ್ದಾಗ ಚಾಲಕ ಬ್ರೇಕ್ ಹಾಕಲು ಪ್ರಯತ್ನಿಸಿದ್ದಾರೆ, ಆದರೆ ತಾಂತ್ರಿಕ ದೋಷದಿಂದ ಬ್ರೇಕ್ ಕೆಲಸ ಮಾಡಲಿಲ್ಲ. ನಿಯಂತ್ರಣ ತಪ್ಪಿರುವುದನ್ನು ಅರಿತು ಚಾಲಕ ಮುನ್ನೆಚ್ಚರಿಕೆವಹಿಸಿ ಕಂಬಕ್ಕೆ ಡಿಕ್ಕಿ ಹೊಡೆಸಿದ್ದಾರೆ. ಪರಿಣಾಮ ಬಸ್ಸಿನ ಕ್ಯಾಬಿನ್​ಗೆ ಹಾನಿಯಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *