ಕಲಬುರಗಿ: ಅನ್ಯಜಾತಿ ಹುಡಗನನ್ನ ಲವ್ ಮಾಡಿದ್ದಕ್ಕೆ ತಂದೆ ತನ್ನ ಸ್ವಂತ 18 ವರ್ಷದ ಮಗಳನ್ನು ಕೊಂದು ಸುಟ್ಟು ಹಾಕಿರುವಂತಹ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ನಡೆದಿದೆ. ಆ ಮೂಲಕ ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ತಣ್ಣಗಿದ್ದ ಮರ್ಯಾದೆ ಹತ್ಯೆ ಮತ್ತೆ ಸದ್ದು ಮಾಡಿದೆ. ಕವಿತಾ ಕೊಲೆಯಾದ ಮಗಳು. ಸದ್ಯ ಫರಹತಬಾದ್ ಠಾಣೆ ಪೊಲೀಸರು ತಂದೆ ಶಂಕರ್ ಕೊಳ್ಳುರು ಬಂಧಿಸಿದ್ದಾರೆ. ಕೊಲೆಗೆ ಸಾಥ್ ನೀಡಿದ್ದ ಶರಣು ಮತ್ತು ದತ್ತಪ್ಪ ಬಂಧನಕ್ಕೆ ಬಲೆ ಬಿಸಿದ್ದಾರೆ.
ಲಿಂಗಾಯತ ಸಮಾಜದ ಯುವತಿ ಅದೇ ಗ್ರಾಮದ ಕುರುಬ ಸಮಾಜದ ಯುವಕ ಮಾಳಪ್ಪ ಪೂಜಾರಿಯನ್ನು ಪ್ರೀತಿಸುತ್ತಿದ್ದಳು. ಕಲಬುರಗಿ ನಗರಕ್ಕೆ ಪಿಯುಸಿ ಅಧ್ಯಯನಕ್ಕೆ ಬರುತ್ತಿದ್ದ ವೇಳೆ ಪ್ರೀತಿ ಮಾಡಿದ್ದರು. ಮೂರ್ನಾಲ್ಕು ತಿಂಗಳ ಹಿಂದೆ ಮನೆಯವರಿಗೆ ಪ್ರೀತಿ ವಿಷಯ ತಿಳಿದಿದ್ದು, ಕಾಲೇಜು ಬಿಡಿಸಿದ್ದರು.
For More Updates Join our WhatsApp Group :