ತಂದೆಯ ಧೂಮಪಾನ ಮಕ್ಕಳ ಆರೋಗ್ಯಕ್ಕೂ ಅಪಾಯ!

ತಂದೆಯ ಧೂಮಪಾನ ಮಕ್ಕಳ ಆರೋಗ್ಯಕ್ಕೂ ಅಪಾಯ!

ತಂದೆ ಧೂಮಪಾನ ಮಾಡುತ್ತಿದ್ದರೆ ಮಕ್ಕಳಿಗೆ ಬರುತ್ತೆ ಗಂಭೀರ ರೋಗಗಳು.

ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಇದು ಧೂಮಪಾನ ಮಾಡುವವರಿಗೂ, ಅವರ ಸುತ್ತಮುತ್ತ ಇರುವವರಿಗೂ ಅನೇಕ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಉಂಟುಮಾಡುತ್ತದೆ. ಆದರೆ ಇತ್ತೀಚಿನ ಒಂದು ಅಧ್ಯಯನವು ಹೊಸ ಆತಂಕಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ. ಹೌದು, ತಂದೆಯಲ್ಲಿರುವ ಧೂಮಪಾನದ ಅಭ್ಯಾಸವು ಮಕ್ಕಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ವೈದ್ಯರು ನಡೆಸಿದ ಈ ಅಧ್ಯಯನವನ್ನು “ಜರ್ನಲ್ ಆಫ್ ದ ಎಂಡೋಕ್ರೈನ್ ಸೋಸೈಟಿ”ಯಲ್ಲಿ ಪ್ರಕಟಿಸಲಾಗಿದೆ. ಅದರಲ್ಲಿ ತಿಳಿಸಿರುವ ಮಾಹಿತಿ ಅನುಸಾರ, ತಂದೆ ಧೂಮಪಾನ ಮಾಡುವವರಾಗಿದ್ದರೆ ಅವರ ಮಕ್ಕಳಲ್ಲಿ ಟೈಪ್- 2 ಮಧುಮೇಹ, ಲಿವರ್ ಸಮಸ್ಯೆ ಮತ್ತು ಇತರ ಮೆಟಾಬಾಲಿಕ್ ಕಾಯಿಲೆಗಳ ಅಪಾಯ ಹೆಚ್ಚಾಗಬಹುದು.

ಮಕ್ಕಳ ಮೆಟಾಬಾಲಿಸಮ್ ಮೇಲೆ ಪರಿಣಾಮ

ಧೂಮಪಾನದ ವೇಳೆ ದೇಹಕ್ಕೆ ಸೇರುವ ನಿಕೋಟಿನ್, ದೇಹದ ಮೆಟಾಬಾಲಿಸಮ್ ಸಂಬಂಧಿತ ಪ್ರಮುಖ ಪ್ರಕ್ರಿಯೆಗಳನ್ನು ಹಾನಿಗೊಳಿಸಬಹುದು. ಇದು ಇನ್ಸುಲಿನ್ ಕಾರ್ಯವಿಧಾನವನ್ನು ಬದಲಾಯಿಸಿ, ಟೈಪ್- 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಇದರ ಪರಿಣಾಮ ಭವಿಷ್ಯದಲ್ಲಿ ಮಕ್ಕಳಿಗೂ ಬರುವ ಸಾಧ್ಯತೆ ಇದೆ. ಅಧ್ಯಯನವು ಮಕ್ಕಳ ಲಿವರ್ ಕಾರ್ಯಕ್ಷಮತೆಯ ಮೇಲೂ ದುಷ್ಪರಿಣಾಮ ಉಂಟಾಗಬಹುದು ಎಂದು ಸೂಚಿಸಿದೆ. ಈ ರೀತಿಯ ಸಮಸ್ಯೆಯನ್ನು ತಡೆಯಲು ತಂದೆಯಾಗಲು ಬಯಸುವವರು ಧೂಮಪಾನದಿಂದ ದೂರವಿರಬೇಕು. ಇದು ವ್ಯಕ್ತಿಯ ಆರೋಗ್ಯ ಕಾಪಾಡುವುದರ ಜೊತೆಗೆ ಭವಿಷ್ಯದಲ್ಲಿ ಮಕ್ಕಳ ಆರೋಗ್ಯವನ್ನು ಕೂಡ ಸರಿಯಾಗಿರಲು ಸಹಾಯ ಮಾಡುತ್ತದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *