ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ನಮ್ಮ ಮೆಟ್ರೋದ ಯೆಲ್ಲೋ ಲೈನ್‌ನಲ್ಲಿ ಐದನೇ ಮೆಟ್ರೋ ರೈಲು ಸೇವೆಗೆ ಸಿದ್ಧವಾಗಿದೆ. ಯೆಲ್ಲೋ ಲೈನ್ ಪ್ರಯಾಣಿಕರಿಗೆ ಇದು ಸಂತಸದ ಸುದ್ದಿಯಾಗಿದೆ. ಈ ಹೊಸ ರೈಲಿನ ಸೇರ್ಪಡೆಯು ಯೆಲ್ಲೋ ಲೈನ್‌ನಲ್ಲಿ ಮೆಟ್ರೋ ಸಂಚಾರ ಸಾಮರ್ಥ್ಯವನ್ನು ಹೆಚ್ಚಿಸಲಿದೆ. ನಿನ್ನೆಯವರೆಗೂ ಯೆಲ್ಲೋ ಲೈನ್‌ನಲ್ಲಿ ನಾಲ್ಕು ಮೆಟ್ರೋ ರೈಲುಗಳು ಕಾರ್ಯನಿರ್ವಹಿಸುತ್ತಿದ್ದವು.
ಇದೀಗ ಐದನೇ ರೈಲು ಟ್ರ್ಯಾಕ್‌ಗಿಳಿದಿದ್ದು, ಭವಿಷ್ಯದಲ್ಲಿ ಪ್ರಯಾಣಿಕರಿಗೆ ಇನ್ನಷ್ಟು ಸುಗಮ ಮತ್ತು ನಿರಂತರ ಸೇವೆಯನ್ನು ಒದಗಿಸಲು ನೆರವಾಗಲಿದೆ. ಯೆಲ್ಲೋ ಲೈನ್ ಬೆಂಗಳೂರಿನ ಮೆಟ್ರೋ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಈ ಹೊಸ ರೈಲಿನ ಚಾಲನೆಯಿಂದ ಹಳದಿ ಮಾರ್ಗದಲ್ಲಿ ಪೀಕ್ ಅವಧಿಯಲ್ಲಿ ರೈಲುಗಳ ಆವರ್ತನವು ಪ್ರತಿ 15 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುತ್ತವೆ. ಇದರಿಂದ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆ ಎಲ್ಲಾ ದಿನಗಳಿಗೆ ಅನ್ವಯವಾಗುತ್ತದೆಯೆಂದು BMRCL ತಿಳಿಸಿದೆ.
For More Updates Join our WhatsApp Group :
