ಹೊಸ ಕ್ರಿಮಿನಲ್ ಕಾನೂನಿನಡಿ ಮೊದಲ FIR ದಾಖಲು

ಬೆಂಗಳೂರು: ದೇಶಾದ್ಯಂತ ಪ್ರಮುಖ ಬದಲಾವಣೆ ಐಪಿಸಿ, ಸಿಆರ್ ಪಿಸಿ, ಎವಿಡೆನ್ಸ್ ಆಕ್ಟ್ ಗಳು ಜುಲೈ 1 ರಿಂದ ದೇಶದಲ್ಲಿ ಜಾರಿ ಬಂದಿದ್ದು, 3 ಹೊಸ ಅಪರಾಧ ಕಾನೂನುಗಳು ಜಾರಿಗೆ ಸಂಬಂಧಿಸಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು ಕಾನೂನುಗಳ ಜಾರಿಗೆ ಆ್ಯಪ್ ರಚಿಸಿದ್ದೇವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಅದು ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಯಶಸ್ಸು ಗೊತ್ತಾಗುತ್ತದೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್​ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ನೀಡಿದ್ದೇವೆ ಎಂದರು.

ಕಾನ್ಸ್‌ಟೇಬಲ್​ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ. ಇಡೀ ದೇಶದಲ್ಲಿ ಮೂರು ಕಾನೂನುಗಳು ಜಾರಿಯಾಗಿವೆ. ಫೀಡ್ ಬ್ಯಾಕ್ ನೋಡಿಕೊಂಡು ಪರಿಷ್ಕರಣೆ ಮಾಡಬಹುದು ಎಂದರು.

ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರುತ್ತಿದ್ದಂತೆ, ಭಾರತೀಯ ನಾಗ್ರಿಕ್ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 173 ರ ಅಡಿಯಲ್ಲಿ ಮೊದಲ ಎಫ್‌ಐಆರ್ ಅನ್ನು ಸೋಮವಾರ ದೆಹಲಿಯಲ್ಲಿ ದಾಖಲಿಸಲಾಗಿದೆ.

ದೆಹಲಿ ರೈಲು ನಿಲ್ದಾಣದಲ್ಲಿ ಫುಟ್‌ ಓವರ್‌ ಬ್ರಿಡ್ಜ್‌ಗೆ ಅಡ್ಡಿಪಡಿಸಿ ಮಾರಾಟ ನಡೆಸಿದ ಬೀದಿಬದಿ ವ್ಯಾಪಾರಿಯೊಬ್ಬನ ಮೇಲೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್‌ 285ರ ಅಡಿಯಲ್ಲಿ ಕೇಸು ದಾಖಲಾಗಿದೆ.

Leave a Reply

Your email address will not be published. Required fields are marked *