ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ 186 ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಲಾದ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು 1:3 ಅನುಪಾತದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ.
ಆಯಾ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಸಿದ್ಧಪಡಿಸಿದ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳು ಬನ್ನೇರುಘಟ್ಟ ರಸ್ತೆಯಲ್ಲಿರುವ ಕಾರ್ಮಿಕರ ಕಲ್ಯಾಣ ಮಂಡಳಿಯ ಕಲ್ಯಾಣ ಸುರಕ್ಷಾ ಭವನದಲ್ಲಿ ನಡೆಯುವ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.
ಕಲ್ಯಾಣ ಅಧಿಕಾರಿ, ಕ್ಷೇತ್ರ ನಿರೀಕ್ಷಕ, ಆಪ್ತ ಸಹಾಯಕ, ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಅಕ್ಟೋಬರ್ 28ರಂದು, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಯಿಂದ ದಾಖಲೆಗಳ ಪರಿಶೀಲನೆ ಕಾರ್ಯ ನಡೆಸಲಾಗುವುದು.