ಹಾಸನಾಂಬೆ ಉತ್ಸವಕ್ಕೆ ಅಂತಿಮ ತೆರೆ: ಮುಂದಿನ ವರ್ಷದ ದರ್ಶನ ಮುಹೂರ್ತ ಘೋಷಣೆ.

ಹಾಸನಾಂಬೆ ಉತ್ಸವಕ್ಕೆ ಅಂತಿಮ ತೆರೆ: ಮುಂದಿನ ವರ್ಷದ ದರ್ಶನ ಮುಹೂರ್ತ ಘೋಷಣೆ.

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಬಂದ್ ಆಗಿದೆ.ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ನಡೆದ ಅಂತಿಮ ಪೂಜೆ ನಡೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರ ಸಮ್ಮುಖದಲ್ಲಿ ಗರ್ಭಗುಡಿಗೆ ಅರ್ಚಕರು ಬೀಗ ಹಾಕಿದರು. ಈ ಮೂಲಕ 15 ದಿನಗಳ ಕಾಲ ನಡೆದ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ.

ಇನ್ನೇನಿದ್ದರೂ ಮುಂದಿನ ವರ್ಷವೇ ಹಾಸನಾಂಬೆ ದರ್ಶನ ಭಾಗ್ಯ ಸಿಗಲಿದ್ದು, ಮುಂದಿನ ವರ್ಷದ ಹಾಸನಾಂಬೆ ಉತ್ಸವಕ್ಕೆ ಮುಹೂರ್ತ ಸಹ ಫಿಕ್ಸ್ ಆಗಿದೆ. ಮುಂದಿನ ವರ್ಷ 29-10-2026 ರಿಂದ 11-11-2026 ರವರೆಗೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಿದೆ. ಒಟ್ಟು 14 ದಿನ ಗರ್ಭಗುಡಿ ತೆರೆದಿರಲಿದ್ದು, ಈ ಪೈಕಿ 12 ದಿನ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *