ಪಾಟ್ನಾ: ಬಿಹಾರದಲ್ಲಿ ಅಂತಿಮ ಹಂತದ ಮತದಾನ ಇಂದು ನಡೆಯುತ್ತಿದೆ. ವಾರಿಸಲಿಗಂಜ್ ಕ್ಷೇತ್ರದ ಬಾರ್ಬಿಘಾ ಪ್ರದೇಶದಲ್ಲಿ ಜನ್ ಸುರಾಜ್ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ.
ಕಾರನ್ನು ಧ್ವಂಸಗೊಳಿಸಲಾಗಿದೆ. ಬಿಗಿ ಭದ್ರತೆಯ ನಡುವೆ ಬಿಹಾರದ 122 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿರುವ ಸಮಯದಲ್ಲಿ ಈ ಬೆಳವಣಿಗೆ ನಡೆದಿದೆ.ಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಂತಿಮ ಹಂತದ ಮತದಾನದಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿ ಹೊಸ ಮತದಾನ ದಾಖಲೆಯನ್ನು ಸ್ಥಾಪಿಸುವಂತೆ ಒತ್ತಾಯಿಸಿದರು. ಈ ಹಂತದಲ್ಲಿ, ನಿತೀಶ್ ಕುಮಾರ್ ಸರ್ಕಾರದ ಹಲವಾರು ಸಚಿವರು ಸೇರಿದಂತೆ 1,302 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು 3.7 ಕೋಟಿ ಮತದಾರರು ನಿರ್ಧರಿಸಲಿದ್ದಾರೆ.
For More Updates Join our WhatsApp Group :
