ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ FIR
ಬೀದರ್ : ಬಿಜೆಪಿ ಶಾಸಕ ಶರಣು ಸಲಗರ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದ್ದು, ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವರು ಶಾಸಕರ ವಿರುದ್ಧ ದೂರು ನೀಡಿದ್ದಾರೆ. ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಶಾಸಕ ಶರಣು ಸಲಗರ ಅವರು ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಅವರಿಂದ 99 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದರು. ಹಣ ಪಡೆದ ಸಮಯದಲ್ಲಿ ಶಾಸಕರು ಭದ್ರತೆಗಾಗಿ ಖಾಲಿ ಚೆಕ್ ನೀಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಿಗದಿತ ಅವಧಿಯೊಳಗೆ ಹಣವನ್ನು ಮರುಪಾವತಿಸದ ಕಾರಣ, ಉದ್ಯಮಿ ನೀಡಿದ ಚೆಕ್ ಅನ್ನು ಬ್ಯಾಂಕಿಗೆ ಸಲ್ಲಿಸಿದಾಗ ಅದು ಬೌನ್ಸ್ ಆಗಿದೆ. ಈ ಘಟನೆಯ ನಂತರ, ಸಂಜೀವ್ ಕುಮಾರ್ ಸುಗುರೆ ಅವರು ಶಾಸಕ ಶರಣು ಸಲಗರ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ, ಪೊಲೀಸರು ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
For More Updates Join our WhatsApp Group :




