ಸಿಎಂ ವಿರುದ್ದ ಲೋಕಾಯುಕ್ತದಲ್ಲಿ ಎಫ್ಐಆರ್!

ಮುಡಾ ಪ್ರಕರಣದ ತನಿಖೆ ಮತ್ತಷ್ಟು ಚುರುಕು: ಸಿಎಂ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್

ಮೈಸೂರು : ಮೂಡ ಪ್ರಾಧಿಕಾರದಲ್ಲಿ ಅಕ್ರಮ ಸೈಟುಗಳನ್ನು ಪಡೆದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತ ಎಫ್ಐಆರ್ ದಾಖಲಸಿಕೊಂಡಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಜನರ ಕುತೂಹಲಕ್ಕೆ ಕಾರಣವಾಗಿದ್ದ ಮೂಡ ಹಗರಣ ಈಗ ಬಹುಮುಖ್ಯ ಘಟ್ಟಕ್ಕೆ ತಲುಪಿದೆ.

ನಿನ್ನೆಯಿಂದ ಮೂರು ದಿನಗಳ ಕಾಲ ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ತಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.

ಮೂಡಾ ಹಗರಣದ ಕುರಿತು ತನಿಖೆಯನ್ನು ಕೋರಿ ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ. ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಈ ಕುರಿತು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಘಟನೆ ರಾಜ್ಯ ರಾಜಕಾರಣದಲ್ಲೇ ಸಂಚಲನ ಮೂಡಿಸಿತ್ತು.

ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ತಳ್ಳಿ ಹಾಕಿ ಲೋಕಾಯುಕ್ತ ತನಿಖೆ ಒಳಪಡುವಂತೆ ಆದೇಶಿಸಿತ್ತು.

Leave a Reply

Your email address will not be published. Required fields are marked *