ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ದ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಎ ಡಿ ಜಿ ಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಬಿಎನ್ಎಸ್ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಎಚ್ ಡಿ ಕುಮಾರಸ್ವಾಮಿ ಆರೋಪಿ ನಂಬರ್ 1 ಆಗಿದ್ದಾರೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿ ನಂಬರ್ 2 ಆಗಿದ್ದಾರೆ ಮತ್ತು ಜೆಡಿಎಸ್ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್ 3 ಆಗಿದ್ದಾರೆ. ಆರೋಪಿಗಳು ದುರುದ್ದೇಶ ಪೋರಿತವಾಗಿ ಆರೋಪ ಮಾಡಿದ್ದಾರೆ ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರು ದೂರಿನಲ್ಲಿ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿ ಎಮ್ ಎಂ ನ್ಯಾಯಾಲಯದ ಆದೇಶದಂತೆ ಎಫ್ ಐ ಆರ್ ದಾಖಲಾಗಿದೆ
Related Posts
ಟೋಲ್ ಡಿವೈಡರ್ಗೆ ಕಾರು ಡಿಕ್ಕಿ, ಮಗು ಸಾವು
ಹುಬ್ಬಳ್ಳಿ: ಕಾರು ಟೋಲ್ ಡಿವೈಡರ್ಗೆ ಡಿಕ್ಕಿ ಹೊಡೆದು ಮೂರು ತಿಂಗಳ ಮಗು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಟೋಲ್ ಬಳಿ ನಡೆದಿದೆ. ಮೃತಪಟ್ಟ…
ಈ ಲಕ್ಷಣಗಳಿದ್ದವರು ಅಪ್ಪಿತಪ್ಪಿಯೂ ಎಳನೀರು ಮುಟ್ಟಲೇಬಾರದು
ಉತ್ತಮ ಆರೋಗ್ಯಕ್ಕಾಗಿ ಎಳನೀರು ಒಳ್ಳೆಯದ್ದು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಕೆಲವು ಆರೋಗ್ಯ ಸಮಸ್ಯೆ ಹೊಂದಿರುವವರು ಎಳನೀರನ್ನು ಕುಡಿಯಬಾರದು. ಹೌದು, ಮನುಷ್ಯನಲ್ಲಿ ಒಳ್ಳೆಯದ್ದು, ಕೆಟ್ಟದ್ದು ಹೇಗೆ ಎರಡು…
ಸರ್ಕಾರ ಉರುಳಿಸಲು 1200 ಕೋಟಿ ಡೀಲ್ : ತನಿಖೆಗೆ ಸಜ್ಜು
ಬೆಂಗಳೂರು: ಆಡಳಿತ ಸರ್ಕಾರ ಉರುಳಿಸಲು 1200 ಕೋಟಿ ಡೀಲ್ ನಡೆದಿರುವ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಖಂಡನೆ. ಈ ಕುರಿತು ತನಿಖೆ ನಡೆಸುವುದಾಗಿ ಹೇಳಿದ ಡಿಸಿಎಂ. ಕಾಂಗ್ರೆಸ್…