ವಿಜಯೋತ್ಸವದ ವೇಳೆ ಅಗ್ನಿ ಅವಘಡ : ನೂತನ ಶಾಸಕನಿಗೆ ಗಾಯ

ವಿಜಯೋತ್ಸವದ ವೇಳೆ ಅಗ್ನಿ ಅವಘಡ : ನೂತನ ಶಾಸಕನಿಗೆ ಗಾಯ

ವಿಜಯೋತ್ಸವದ ವೇಳೆ ಅಗ್ನಿ ಅವಘಡ : ನೂತನ ಶಾಸಕನಿಗೆ ಗಾಯ

ಮುಂಬೈ: ನೂತನ ಶಾಸಕನ ವಿಜಯೋತ್ಸವ ಸಂದರ್ಭದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಮಹಗಾಂವ್ ಪಟ್ಟಣದಲ್ಲಿ ನಡೆದಿದೆ.

ಚಂದಗಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಶಿವಾಜಿ ಪಾಟೀಲ್‌ ಅವರಿಗೆ ಅಭಿಮಾನಿಗಳು ಆರತಿ ಮಾಡುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಆರತಿ ಮಾಡುವ ಸಂದರ್ಭದಲ್ಲಿ ಜೆಸಿಬಿ ಮೂಲಕ ಗುಲಾಲವನ್ನು (ಕೆಂಪು ಬಣ್ಣದ ಪುಡಿ) ಆರತಿ ಮೇಲೆ ಸುರಿಯಲಾಗಿದೆ. ಈ ವೇಳೆ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಹೊತ್ತಿದೆ. ಅವಘಡದಲ್ಲಿ ನೂತನ ಶಾಸಕ ಸೇರಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ

ಬೆಂಕಿ ಹೊತ್ತಿಕೊಳ್ಳುತ್ತಲೇ ಜನ ಅಲ್ಲಿಂದ ಓಡಿದ್ದಾರೆ. ಅಲ್ಲದೇ ಬೆಂಕಿ ಸಹ ಕೂಡಲೇ ನಿಯಂತ್ರಣಕ್ಕೆ ಬಂದಿದ್ದರಿಂದ ಭಾರೀ ಅವಘಡ ತಪ್ಪಿದಂತಾಗಿದೆ.

Leave a Reply

Your email address will not be published. Required fields are marked *