ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ – ಹುಳಿಯಾರು ಬಳಿ ಘಟನೆ
ತುಮಕೂರು: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಚಲಿಸುತ್ತಿದ್ದ KSRTC ಬಸ್‌ನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಚಾಲಕನ ತಕ್ಷಣದ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ.ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ.
ಡೀಸೆಲ್ ಸೋರಿಕೆಯ ಕಾರಣದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಘಟನೆ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ನೀರು ಹಾಕಿ ಬೆಂಕಿಯನ್ನು ನಂದಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.ಚಾಲಕನ ಸಮಯಪ್ರಜ್ಞೆ ಮತ್ತು ಸ್ಥಳೀಯರ ತ್ವರಿತ ಸಹಾಯದಿಂದ ಯಾವುದೇ ಪ್ರಾಣಾಪಾಯ ಸಂಭವಿಸದೇ ಭಾರಿ ಅನಾಹುತ ತಪ್ಪಿದೆ.
For More Updates Join our WhatsApp Group :




