ಬೆಂಗಳೂರು : ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ಮದನ್ ಸಿಂಗ್ ಮೃತ ವ್ಯಕ್ತಿ. ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಮೂವರು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.
ಅಗ್ನಿ ಅವಘಡದ ಕಟ್ಟಡದಲ್ಲಿ ಕುಟುಂಬ ವಾಸ
ಸಂದೀಪ್ ಮತ್ತು ಬಾಲಕೃಷ್ಣ ಎಂಬುವವರ ಒಡೆತನದ ಒಟ್ಟು ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನೆಲಮಹಡಿ ಸೇರಿ ಎರಡು ಮಹಡಿಯಲ್ಲಿ ಗೋಡೌನ್ ಇದೆ. ಮೊದಲ ಮಹಡಿಯಲ್ಲಿ ಮೂವರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಮೂರನೇ ಮಹಡಿಯಲ್ಲಿ ಕುಟುಂಬವೊಂದು ವಾಸವಿದೆ. ಮದನ್ ಕುಮಾರ್ ಪತ್ನಿ ಸಂಗೀತಾ, ಮಕ್ಕಳಾದ ವಿಹಾನ್ ಹಾಗೂ ನಿತೇಶ್ ವಾಸವಿದ್ದರು. ಘಟನೆಯಲ್ಲಿ ಮದನ್ ಸಿಂಗ್ ಸಾವನ್ನಪ್ಪಿದ್ದು, ಉಳಿದ ಮೂವರು ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಾಲ್ಕನೆ ಮಹಡಿಯಲ್ಲಿ ಸಣ್ಣದೊಂದು ರೂಮ್ ಕೂಡ ಇದೆ.
ಮಾಜಿ ಶಾಸಕ ಆರ್.ವಿ.ದೇವರಾಜ್ ಹೇಳಿದ್ದಿಷ್ಟು
ಇನ್ನು ಘಟನಾ ಸ್ಥಳಕ್ಕೆ ಮಾಜಿ ಶಾಸಕ ಆರ್.ವಿ.ದೇವರಾಜ್ ಭೇಟಿ ಬಳಿಕ ಹೇಳಿಕೆ ನೀಡಿದ್ದು, ಬೆಂಕಿ ಕಾಣಿಸಿಕೊಂಡ ಕಟ್ಟಡದಲ್ಲಿ ಐವರು ಇರುವ ಶಂಕೆ ವ್ಯಕ್ತವಾಗಿದೆ. ಹೊರ ರಾಜ್ಯಗಳಿಂದ ಜನ ಬಂದು ಕಟ್ಟಡಗಳನ್ನು ಕಟ್ಟಿಕೊಳ್ಳುತ್ತಾರೆ. ಅಂತಹವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ದಟ್ಟ ಹೊಗೆ: ಶೋಧ ಕಾರ್ಯಕ್ಕೆ ಕಷ್ಟ
ಸದ್ಯ ಸ್ಥಳಕ್ಕೆ ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮತ್ತು ಪೂರ್ವ ವಿಭಾಗ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ಮಾಡಿದರು. ಕಟ್ಟಡದ ಬಳಿ ದಟ್ಟ ಹೊಗೆ ಆವರಿಸಿಕೊಂಡಿದೆ. ಹೊಗೆಯಿಂದಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಗೂ ಕಷ್ಟವಾಗುತ್ತಿದೆ. ಪ್ಲಾಸ್ಟಿಕ್ ವಸ್ತು ಇರುವುದರಿಂದ ಕಟ್ಟಡದ ಒಳಗೆ ಹೊಗೆ ಆವರಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿಗೆ ಒಳಗೆ ಹೋಗಲಾಗುತ್ತಿಲ್ಲ. ಹಾಗಾಗಿ ಉಳಿದವರ ಶೋಧ ಕಾರ್ಯ ಕಷ್ಟವಾಗುತ್ತಿದೆ. ಇವರೆಗೆ ಎರಡು ಮೃತದೇಹಗಳು ಶಿಫ್ಟ್ ಮಾಡಲಾಗಿದೆ.
For More Updates Join our WhatsApp Group :