ವೇದಿಕೆ ಹತ್ತಿರ ಶಾರ್ಟ್ ಸರ್ಕ್ಯೂಟ್ ನಿಂದ ಬೆ*ಕಿ ಕಾಣಿಸಿಕೊಂಡ ಘಟನೆ ಆತಂಕ ಮೂಡಿಸಿದೆ.!
ರಾಯಚೂರು : ಜಿಲ್ಲೆಯ ಸಿಂಧನೂರಿನಲ್ಲಿ ನಡೆದ 151 ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಆತಂಕ ಮೂಡಿಸಿದೆ.
ವೇದಿಕೆಯಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೆರಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಕ್ಷಣಕಾಲ ಗೊಂದಲ ಉಂಟಾಯಿತು.ಈಶ್ವರ ಖಂಡ್ರೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ವೇಳೆ ಸಿಬ್ಬಂದಿ ತಕ್ಷಣ ಮಧ್ಯ ಪ್ರವೇಶಿಸಿ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು.
ಹೊಗೆ ಹೆಚ್ಚಾದ ಕಾರಣ ಸ್ಥಳೀಯರು ಭಯಗೊಂಡರು. ಕೆಲಕಾಲ ಕಾರ್ಯಕ್ರಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
For More Updates Join our WhatsApp Group :




