ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ಅಗ್ನಿಗಾಹುತಿಯಾದ ಘಟನೆ ಇಂದು ಬೆಳಗ್ಗೆ ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಸಮೀಪ ನಡೆದಿದೆ. ಇಂಜಿನ್ನಲ್ಲಿ ದಿಢೀರ್ ಕಾಣಿಸಿಕೊಂಡಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಕೂಡಲೇ ಎಚ್ಚೆತ್ತ ಬಸ್ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಇಡೀ ಬಸ್ ಅನ್ನು ಆವರಿಸಿಕೊಂಡಿತು.
ಎಂ.ಜಿ.ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ಹತೋಟಿಗೆ ತಂದರು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ