ಫತೇಘರ್ ಸಾಹಿಬ್ : ಇಂದು ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ರೈಲು ಅಪಘಾತ ಸಂಭವಿಸಿದೆ. ಸಿರ್ಹಿಂದ್ ರೈಲು ನಿಲ್ದಾಣದ ಬಳಿ ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ರೈಲಿನ ಎಸಿ ಬೋಗಿಗಳಲ್ಲಿ ಒಂದರಲ್ಲಿ ಹೊಗೆ ಕಾಣಿಸಿಕೊಂಡಿದೆ.
ಬೆಂಕಿಯ ಜ್ವಾಲೆಯನ್ನು ನೋಡಿದ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದರು. ಬೋಗಿಯಲ್ಲಿದ್ದ ಪ್ರಯಾಣಿಕರು ತಕ್ಷಣವೇ ಇಳಿದು ತಮ್ಮ ಸಾಮಾನುಗಳನ್ನು ತೆಗೆದುಕೊಂಡು ಹೊರಗೆ ಹೋದರು. ರೈಲಿನಿಂದ ಇಳಿಯುವಾಗ ಹಲವಾರು ಪ್ರಯಾಣಿಕರು ಗಾಯಗೊಂಡರು. ಒಂದು ಗಂಟೆಯ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
For More Updates Join our WhatsApp Group :




