ಮೈಸೂರಿನಲ್ಲಿ ಈ ಸ್ಥಳಗಳಲ್ಲಿ ಪಟಾಕಿ ಹೊಡೆಯುವಂತಿಲ್ಲ:  ಕಮಿಷನರ್

ಮೈಸೂರಿನಲ್ಲಿ ಈ ಸ್ಥಳಗಳಲ್ಲಿ ಪಟಾಕಿ ಹೊಡೆಯುವಂತಿಲ್ಲ: ಕಮಿಷನರ್

ಮೈಸೂರು: ದೀಪಾವಳಿ ಹಬ್ಬ ಬಂತೆಂದರೆ ಸಾಕು ಎಲ್ಲೆಡೆ ಪಟಾಕಿ ಹಚ್ಚುವವರ ಸಂಖ್ಯೆ ಹೆಚ್ಚಿರುತ್ತದೆ ಇನ್ನು ದೀಪಾವಳಿ ಹಬ್ಬದ ಅಂಗವಾಗಿ ರಾಜ್ಯದಲ್ಲಿ ಕೇವಲ ಹಸಿರು ಪಟಾಕಿ ಸೇರಿಸುವುದಕ್ಕೆ ಮಾತ್ರ ಅವಕಾಶವಿದ್ದು ಅಲ್ಲದೆ ರಾತ್ರಿ ಎಂಟು ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸೇರಿಸುವುದಕ್ಕೆ ಅವಕಾಶ ಇದೆ ಎಂದು ಈಗಾಗಲೇ ರಾಜ್ಯ ಸರ್ಕಾರ ತಿಳಿಸಿದೆ. ಇನ್ನು ಮೈಸೂರಿನ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ನಿಶಬ್ದ ವಲಯ ಎಂದು ಘೋಷಿಸಿರುವ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದು ನಿಷೇಧಿಸಲಾಗಿದೆ ಎಂದಿದ್ದಾರೆ. ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ,  ಕಾರಂಜಿ ಕೆರೆ, ಲಿಂಗಂಬುದಿಕೆರೆ, ಸಾರ್ವಜನಿಕ ಉದ್ಯಾನವನಗಳು ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್ ಗಳು ಶೈಕ್ಷಣಿಕ ಸಂಸ್ಥೆಗಳು ನ್ಯಾಯಾಲಯ ಧಾರ್ಮಿಕ ಸ್ಥಳಗಳಲ್ಲಿ 100 ಮೀಟರ್ ಸುತ್ತಳತೆಯ ಪ್ರದೇಶದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.

Leave a Reply

Your email address will not be published. Required fields are marked *