ಬೆಂಗಳೂರು: ರಾತ್ರಿ 8 ರಿಂದ 10 ರವರೆಗೆ ಮಾತ್ರ ಪಟಾಕಿ ಸಿಡಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸುಪ್ರಿಂಕೋರ್ಟ್ ನಿರ್ದೇಶನ ಕೂಡ ಇದೆ. ಪಟಾಕಿ ಸಿಡಿಸುವುದರಿಂದ ಮಕ್ಕಳು ಕಣ್ಣು ಕಳೆದುಕೊಂಡಿದ್ದಾರೆ. ಕೆಲವೆಡೆ ಜೀವ ಕಳೆದುಕೊಂಡಿದ್ದಾರೆ. ದೊಡ್ಡ ಮಟ್ಟದ ಪರಿಸರ ಹಾನಿಯಾಗುತ್ತೆ ಎಂದರು.
ಪರಿಸರ ಪ್ರಕೃತಿ ಸಂರಕ್ಷಣೆ ಮಾಡಬೇಕು. ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಹಸಿರು ಪಟಾಕಿಗಳನ್ನ ಬಳಸಬೇಕು. ಪಟಾಕಿ ಮಾರಾಟ ಮಾಡುವವರು ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು. ಈ ಬಗ್ಗೆ ಪಟಾಕಿ ಮಾರಾಟಗಾರರಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ತಿಳಿಸಿದರು.