Foreign duck case ; ಸೆ.4ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ.

ಜೈಲಿನ ಕಠಿಣ ನಿಯಮದಿಂದ ಎರಡೇ ದಿನಕ್ಕೆ ಸುಸ್ತಾದ ದರ್ಶನ್.

ಪ್ರಾಣಿ, ಪಕ್ಷಿಗಳ ಬಗ್ಗೆ ನಟ ದರ್ಶನ್ ತೂಗುದೀಪ ಅವರಿಗೆ ವಿಶೇಷ ಪ್ರೀತಿ ಇದೆ. ಆದರೆ ಅನುಮತಿ ಪಡೆಯದೆಯೇ ಅವರು ವಿದೇಶಿ ಬಾತುಕೋಳಿ ಸಾಕಿದ್ದರು. ಈ ಕೇಸ್ಗೆ ಸಂಬಂಧಿಸಿದಂತೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಇಂದು (ಜುಲೈ 2) ದರ್ಶನ್ ಅವರು ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು.

ನಟ ದರ್ಶನ್ ತೂಗುದೀಪ ಅವರು ಮಾಡಿಕೊಂಡ ವಿವಾದಗಳು ಒಂದೆರಡಲ್ಲ. ರೇಣುಕಾಸ್ವಾಮಿ ಕೊಲೆ ಆರೋಪದಿಂದ ಅವರು ಹಲವು ತಿಂಗಳು ಜೈಲಿನಲ್ಲಿ ಕಳೆಯುವಂತಾಗಿತು. ಅದಲ್ಲದೇ, ದರ್ಶನ್ ಅವರು ತಮ್ಮ ಫಾರ್ಮ್ಹೌಸ್ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದು ಕೂಡ ವಿವಾದಕ್ಕೆ ಕಾರಣ ಆಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಎಫ್ಐಆರ್ ದಾಖಲು ಮಾಡಿತ್ತು. ಆ ಕೇಸ್ ವಿಚಾರಣೆಗೆ ಇಂದು ಟಿ. ನರಸಿಪುರ ಕೋರ್ಟ್ಗೆ ದರ್ಶನ್ ಹಾಜರಾಗಬೇಕಿತ್ತು. ಕೋರ್ಟ್ನಿಂದ ದರ್ಶನ್-ವಿಜಯಲಕ್ಷ್ಮೀ ದಂಪತಿಯ ವಿಚಾರಣೆ ಮುಂದೂಡಿಕೆ ಆಗಿದೆ.

ನ್ಯಾಯಾಲಯವು ಸೆಪ್ಟೆಂಬರ್ 4ಕ್ಕೆ ವಿಚಾರಣೆ ಮುಂದೂಡಿದೆ. ಅರಣ್ಯ ಇಲಾಖೆ 2 ವರ್ಷದ ಹಿಂದೆ ನೋಟಿಸ್ ನೀಡಿ FIR ದಾಖಲಿಸಿತ್ತು. ವಿದೇಶಿ ಬಾತುಕೋಳಿ ಸಾಕಲು ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಎಫ್ಐಆರ್ ಹಾಕಲಾಗಿತ್ತು. ಮೈಸೂರು ಜಿಲ್ಲೆಯ ಟಿ. ನರಸಿಪುರ ತಾಲೂಕಿನ ಕೆಂಪಯ್ಯನಹುಂಡಿಯಲ್ಲಿ ಇರುವ ಫಾರ್ಮ್ ಹೌಸ್ನಲ್ಲಿ ದರ್ಶನ್ ಅವರು ಬಾರ್ ಹೆಡೆಡ್ ಗೂಸ್ ಬಾತುಕೋಳಿ ಸಾಕಿದ್ದರು.

ಈ ಬಗ್ಗೆ ಯುಟ್ಯೂಬ್ ಚಾನೆಲ್ ಸಂದರ್ಶನದಲ್ಲಿ ದರ್ಶನ್ ಮಾಹಿತಿ ನೀಡಿದ್ದಾಗ ವಿಷಯ ಬಹಿರಂಗ ಆಗಿತ್ತು. ದರ್ಶನ್, ಪತ್ನಿ ವಿಜಯಲಕ್ಷ್ಮೀ ಸೇರಿ ಮೂವರಿಗೆ ಅರಣ್ಯ ಇಲಾಖೆಯವರು ನೋಟಿಸ್ ನೀಡಿದ್ದರು. ತೋಟದ ಮ್ಯಾನೇಜರ್ ನಾಗರಾಜುಗೂ ನೋಟಿಸ್ ನೀಡಲಾಗಿತ್ತು. ದರ್ಶನ್ ಪರ ಸುನೀಲ್ ಕುಮಾರ್ ವಕೀಲರಾಗಿದ್ದಾರೆ. ಸುನೀಲ್ ಪರವಾಗಿ ಹಿರಿಯ ವಕೀಲ ಬಸವಣ್ಣ ಕೋರ್ಟ್ಗೆ ಹಾಜರಾಗಿದ್ದರು. ನ್ಯಾಯಾಲಯ ಈ ಕೇಸ್ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *