BAMUL ನಿರ್ದೇಶಕರಾಗಿ ಮಾಜಿ ಸಂಸದ DK Suresh ಅವಿರೋಧ ಆಯ್ಕೆ..!

BAMUL ನಿರ್ದೇಶಕರಾಗಿ ಮಾಜಿ ಸಂಸದ DK Suresh ಅವಿರೋಧ ಆಯ್ಕೆ..!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಿರಿಯ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಕನಕಪುರದಿಂದ ಬಮುಲ್ (ಬೆಂಗಳೂರು ಹಾಲು ಒಕ್ಕೂಟ ಲಿಮಿಟೆಡ್) ನಿರ್ದೇಶಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಬಮುಲ್ (ಬೆಂಗಳೂರು ಹಾಲು ಒಕ್ಕೂಟ ಲಿಮಿಟೆಡ್) ನಿರ್ದೇಶಕ ಸ್ಥಾನಕ್ಕೆ ಡಿಕೆ.ಸುರೇಶ್ ಅವರು ಶನಿವಾರ ನಾಮಪತ್ರ ಸಲ್ಲಿಸಿದ್ದರು. ಇತರರ ಆಕಾಂಕ್ಷಿಗಳು ಸಲ್ಲಿಸಿದ ನಾಮಪತ್ರಗಳು ಅಮಾನ್ಯವಾಗಿದ್ದ ಹಿನ್ನೆಲೆಯಲ್ಲಿ ಸುರೇಶ್ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಬಮುಲ್ ನಿರ್ದೇಶಕರಾಗಿ ಸುರೇಶ್ ಅವರು ಆಯ್ಕೆಯಾಗಿರುವುದು ಕರ್ನಾಟಕ ಹಾಲು ಸಹಕಾರಿ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು, ಕೆಎಂಎಫ್ ಅಧ್ಯಕ್ಷರಾಗಲು ಒಂದು ಮೆಟ್ಟಿಲು ಮುಂದೆ ಸಾಗಿದಂತಾಗಿದೆ.

ಇದೀಗ ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ ಸುರೇಶ್ ಅವರು, ಬೆಂಬಲ ಪಡೆಯುವ ಸಲುವಾಗಿ ವಿವಿಧ ತಾಲ್ಲೂಕುಗಳಿಂದ ತಮ್ಮ ಬೆಂಬಲಿಗರನ್ನು ನಿರ್ದೇಶಕರನ್ನಾಗಿ ಮಾಡುವತ್ತ ಗಮನಹರಿಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಈ ನಡುವೆ ಬಮುಲ್ ನಿರ್ದೇಶಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸುರೇಶ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಮತ್ತು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಅವರು ಕೂಡ ಈ ಹುದ್ದೆಗೆ ಸ್ಪರ್ಧೆಯಲ್ಲಿರುವುದಾಗಿ ಹೇಲಿದ್ದು, ಬಳ್ಳಾರಿಯಿಂದ ನಿರ್ದೇಶಕ ಹುದ್ದೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಕರ್ನಾಟಕ ಹೈಕೋರ್ಟ್ ತೀರ್ಪಿನ ನಂತರ ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *